Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ
(ರಾಜ್ಯ ) ಜಿಲ್ಲೆ

ಬಿಎಲ್ಡಿಇ ಆಸ್ಪತ್ರೆ: ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಸ್ವಿಚ್ ಆನ್ ಕಾರ್ಯಕ್ರಮ ಯಶಸ್ವಿ ನಡೆಯಿತು.
ಶುಕ್ರವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಕಿವಿ, ಮೂಗು ಮತ್ತು ಗಂಟಲು(ENT) ವಿಭಾಗದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಒಳಗಾದ ಮಗುವಿನ ಸ್ವಿಚ್ ಆನ್ ಮಾಡಲಾಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಆಸ್ಪತ್ರೆಯ ಅಧೀಕ್ಷಕ ಡಾ. ಸಂಜೀವ ಬೆಂಟೂರ, ಹಿರಿಯ ಉಪಪ್ರಾಂಶುಪಾಲ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಕಾಕ್ಲಿಯರ್ ಇಂಪ್ಲಾಂಟ್ ಸಮನ್ವಯ ಅಧಿಕಾರಿ ಡಾ. ಎಚ್. ಟಿ. ಲತಾದೇವಿ ಹಾಗೂ ಇನ್.ಎನ್.ಟಿ ವಿಭಾಗದ ಮುಖ್ಯಸ್ಥ ಡಾ. ರವೀಂದ್ರ ಕರಡಿ ಉಪಸ್ಥಿತರಿದ್ದರು.
ಹುಟ್ಟು ಕಿವುಡುತನದಿಂದ ಬಳಲುತ್ತಿದ್ದ ಈ ಮಗುವಿಗೆ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಸ್ವಿಚ್ ಆನ್ ಪ್ರಕ್ರಿಯೆಯ ಮೂಲಕ ಮೊದಲ ಬಾರಿಗೆ ಧ್ವನಿಯನ್ನು ಆಲಿಸುವ ಅನುಭವವನ್ನು ಮಗು ಪಡೆಯಿತು‌. ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಡಾ. ಅರುಣ ಚಂ. ಇನಾಮದಾರ, ವೈದ್ಯರ ಪರಿಣತಿ, ಪಾಲಕರ ಸಹಕಾರ ಹಾಗೂ ಆಸ್ಪತ್ರೆಯ ಸೌಲಭ್ಯಗಳ ಸಮನ್ವಯದಿಂದ ಇಂಥ ಜೀವಿತ ಪರಿವರ್ತನೆಯ ಚಿಕಿತ್ಸೆಗಳು ಸಾಧ್ಯವಾಗುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ವೈದ್ಯರು ಮತ್ತು ಸಿಬ್ಬಂದಿಯನ್ನು ಅವರು ಅಭಿನಂದಿಸಿದರು.
ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯ ಕುರಿತು ಮಾಹಿತಿ ನೀಡಿದ ಡಾ. ಎಚ್. ಟಿ. ಲತಾದೇವಿ, ಶಸ್ತ್ರಚಿಕಿತ್ಸೆಯ ನಂತರ ಎರಡು ವರ್ಷಗಳ ಕಾಲ ವಾಕ್-ಶ್ರವಣ ತರಬೇತಿ ನೀಡಲಾಗುತ್ತದೆ. ಇದರ ಮೂಲಕ ಮಗು ಸಾಮಾನ್ಯ ಮಕ್ಕಳಂತೆ ಶಿಕ್ಷಣ ಪಡೆದು ಜೀವನದ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳ ಪಾಲಕರಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು. ಅಲ್ಲದೇ, ಕಾಕ್ಲಿಯರ್ ಇಂಪ್ಲಾಂಟ್ ಕಿಟ್ ಅನ್ನು ಹಸ್ತಾಂತರಿಸಿ ಮಗುವಿನ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.
ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಮಾತನಾಡಿ, ಕಾಕ್ಲಿಯರ್ ಇಂಪ್ಲಾಂಟ್ ಸೌಲಭ್ಯದ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದ್ದು, ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಇಂಥ ಅತ್ಯಾಧುನಿಕ ಚಿಕಿತ್ಸೆ ಸೇವೆಗಳನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಸಾಮಾನ್ಯವಾಗಿ ರೂ. 7.50 ಲಕ್ಷದಿಂದ ರೂ.15 ಲಕ್ಷದವರೆಗೆ ವೆಚ್ಚವಾಗುತ್ತದೆ. ಆದರೆ ಸರಕಾರದ ನಾನಾ ಯೋಜನೆಗಳಡಿ ಅರ್ಹ ಫಲಾನುಭವಿಗಳು ಈ ಸೌಲಭ್ಯವನ್ನು ಪಡೆಯಬಹುದಾಗಿದೆ. ಇಂಥ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಅಗತ್ಯವಿರುವ ಎಲ್ಲಾ ಆಧುನಿಕ ಸೌಲಭ್ಯಗಳು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಲಭ್ಯವಿವೆ.
ಆಸ್ಪತ್ರೆಯ ವಾಕ್-ಶ್ರವಣ ವಿಭಾಗದಲ್ಲಿ ನಡೆದ ಸ್ವಿಚ್ ಆನ್ ಕಾರ್ಯಕ್ರಮದಲ್ಲಿ ಒಂದೂವರೆ ವರ್ಷದ ಮಗುವಿಗೆ ಮೊದಲ ಬಾರಿಗೆ ಧ್ವನಿ ಕೇಳಿಸಿದಾಗ ಮಗು ಸಂತಸದಿಂದ ಪ್ರತಿಕ್ರಿಯಿಸಿತು. ವಾಕ್-ಶ್ರವಣ ತಜ್ಞರಾದ ಶ್ರೀ ಸಂತೋಷ್ ಹಾಗೂ ಕುಮಾರಿ ರಕ್ಷಿತಾ ಅವರು ಈ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.
ಶಸ್ತ್ರಚಿಕಿತ್ಸೆ ಪಡೆದ ಮಗುವಿನ ಪಾಲಕರು ಮಾತನಾಡಿ, ನಮ್ಮ ಮಗುವಿನ ಜೀವನದಲ್ಲಿ ಹೊಸ ಆಶಾಕಿರಣ ಮೂಡಿದೆ. ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಸೇವೆಯಿಂದ ನಮ್ಮ ಮಗುವಿನ ಭವಿಷ್ಯದ ಬಗ್ಗೆ ಹೊಸ ಭರವಸೆ ಮೂಡಿದೆ ಎಂದು ಕೃತಜ್ಞತೆ ಸಲ್ಲಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.