ಉದಯರಶ್ಮಿ ದಿನಪತ್ರಿಕೆ
“ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ, ವಿಜಯಪುರ” ವತಿಯಿಂದ ಶುಕ್ರವಾರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ. ಗದ್ದಿಗೌಡರ ಅವರನ್ನು ಭೇಟಿ ಮಾಡಿ, ಆಲಮಟ್ಟಿ ಅಣೆಕಟ್ಟಿನಲ್ಲಿ 524.256 ಮೀಟರ್ ಮಟ್ಟದವರೆಗೆ ನೀರಿನ ಸಂಗ್ರಹ ಹಾಗೂ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ಮನವಿಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿ ಮುಖಂಡರು, “ಆಲಮಟ್ಟಿ ಆಣೆಕಟ್ಟಿನ ನೀರಿನ ಸಂಗ್ರಹ ಹಾಗೂ ನೀರಿನ ಬಳಕೆಯ ಹಕ್ಕು ಕೇವಲ ಒಂದು ಜಿಲ್ಲೆಯ ಬೇಡಿಕೆಯಲ್ಲ, ಇದು ಇಡೀ ಕೃಷ್ಣಾ ಕೊಳ್ಳ ಪ್ರದೇಶದ ರೈತರು, ಯುವಕರು, ಮಹಿಳೆಯರು ಮತ್ತು ಜನಸಾಮಾನ್ಯರ ಬದುಕಿನ ಪ್ರಶ್ನೆಯಾಗಿದೆ. ನೀರಿನ ನ್ಯಾಯಯುತ ಹಂಚಿಕೆ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ” ಎಂದು ತಿಳಿಸಿದರು.
“ನೀರು ನಮ್ಮ ಹಕ್ಕು – ಆಲಮಟ್ಟಿ ಅಣೆಕಟ್ಟಿನಲ್ಲಿ 524.256 ಮೀ. ವರೆಗೆ ನೀರಿನ ಸಂಗ್ರಹ ಹಾಗೂ ಬಳಕೆ ನಮ್ಮ ಗುರಿ” ಎಂಬ ಘೋಷಣೆಯೊಂದಿಗೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಮಿತಿಯವರು ತಿಳಿಸಿದರು.
ಈ ಸಂದರ್ಭದಲ್ಲಿ ಕೃಷ್ಣಾ ಕೊಳ್ಳ ಜಲ ಸಂರಕ್ಷಣಾ ಹೋರಾಟ ಸಮಿತಿಯ ಸದಸ್ಯರಾದ ಜಮಖಂಡಿ ಮಾಜಿ ಶಾಸಕರು ಶ್ರೀಕಾಂತ್ ಕುಲಕರ್ಣಿ, ಎಸ್.ವಿ.ಪಾಟೀಲ್, ಪಂಚಪ್ಪ ಕಲಬುರ್ಗಿ, ಅರವಿಂದ್ ಕುಲಕರ್ಣಿ, ಬಿ. ಭಗವಾನ್ ರೆಡ್ಡಿ, ಲಲಿತಾ ಬಿಜ್ಜರಗಿ, ಸುರೇಶ್ ಬಿಜಾಪುರ, ಸಿದ್ದಲಿಂಗ ಬಾಗೇವಾಡಿ, ಭೋಗೇಶ್ ಸೋಲಾಪುರ್ ಹಾಗೂ ಗುರುರಾಜ್ ಪಡಶೆಟ್ಟಿ ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

