Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
(ರಾಜ್ಯ ) ಜಿಲ್ಲೆ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಇಂದಿನ ಯಾಂತ್ರಿಕೃತ ಮತ್ತು ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಯೋಗ ಅತ್ಯಂತ ಅವಶ್ಯಕವಾಗಿದೆ. ಪ್ರತಿನಿತ್ಯ ಯೋಗಾಸನ ಮತ್ತು ಪ್ರಾಣಾಯಾಮ ಮಾಡುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ, ಏಕಾಗ್ರತೆ ವೃದ್ಧಿಸುತ್ತದೆ ಮತ್ತು ಒತ್ತಡದಿಂದ ಮುಕ್ತಿ ಪಡೆಯಬಹುದು ಎಂದು ನಗರದ ವಿವಾ ಫಿಟ್ನೆಸ್ ಸೆಂಟರ್ ಮುಖ್ಯಸ್ಥೆ ವಿಜಯಲಕ್ಷ್ಮಿ ಗಿರಗಾವಿ ಹೇಳಿದರು.
ನಗರದ ಸುಭಾಶ್ಚಂದ್ರ ಭೋಸ್ ವೃತ್ತದ ಬಳಿಯಿರುವ ತಮ್ಮ “ವಿವಾ ಫಿಟ್ನೆಸ್ ಕೇಂದ್ರ” ದಲ್ಲಿ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಮಹಿಳಾ ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿ ಅವರು ಮಾತನಾಡಿದರು.
ಯೋಗವು ಯಾವುದೇ ವಯಸ್ಸಿನವರಿಗೂ ಸೂಕ್ತವಾಗಿದ್ದು, ಇದು ನಮಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ನೀಡುತ್ತದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಅದನ್ನು ನಮ್ಮ ದೈನಂದಿನ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ ಎಂದು ವಿಜಯಲಕ್ಷ್ಮಿ ಅವರು ಸಲಹೆ ನೀಡಿದರು.
’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಅವರು ಮಾತನಾಡಿ, ಭಾರತದ ಪ್ರಾಚೀನ ಸಂಸ್ಕೃತಿಯ ಕೊಡುಗೆಯಾಗಿರುವ ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ನಮ್ಮ ಮನಸ್ಸು, ದೇಹ ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವ ಅದ್ಭುತ ಮಾರ್ಗವಾಗಿದೆ. ನಮ್ಮ ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಪ್ರೇರಣೆಯಿಂದಾಗಿ ಇಂದು ಯೋಗವು ಇಡೀ ವಿಶ್ವಕ್ಕೆ ಪಸರಿಸಿದೆ. “ಆರೋಗ್ಯವೇ ಭಾಗ್ಯ” ಎಂಬ ಮಾತಿನಂತೆ, ನಿತ್ಯ ಯೋಗಾಭ್ಯಾಸದ ಮೂಲಕ ಸದೃಢ ಸಮಾಜವನ್ನು ನಿರ್ಮಿಸೋಣ ಎಂದು ಕರೆ ನೀಡಿದರು.
ಸಿದ್ದಸಿರಿ ಬ್ಯಾಂಕಿನ ಅಧಿಕಾರಿ ಶ್ರೀಮತಿ ಮೋನಾ ಬಿರಾದಾರ ಅವರು ಮಾತನಾಡಿ, ಮಾನವನ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳಲು ಮತ್ತು ಪ್ರಕೃತಿಯೊಂದಿಗೆ ಸಾಮರಸ್ಯ ಸಾಧಿಸಲು ಯೋಗವು ಅತ್ಯಂತ ಉಪಯುಕ್ತವಾಗಿದೆ. ನಾವೆಲ್ಲರೂ ಪ್ರತಿದಿನ ಯೋಗ ಮಾಡುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳೋಣ ಎಂದು ಹೇಳಿದರು.
ಉಪನ್ಯಾಸಕಿ ಅನುಪಮಾ ಬಿರಾದಾರ ಮಾತನಾಡಿ, ಪ್ರತಿ ವರ್ಷ ಜೂನ್ 21 ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮೀಸಲಾದ ಜಾಗತಿಕ ಕಾರ್ಯಕ್ರಮವಾಗಿದೆ. ಈ ದಿನವು ಲಕ್ಷಾಂತರ ಜನರನ್ನು ಒಗ್ಗೂಡಿಸಿ ಯೋಗದ ಮಹತ್ವವನ್ನು ಸಾರುತ್ತದೆ ಎಂದು ಹೇಳಿದರು.
ತರಬೇತಿಯಲ್ಲಿ ಪ್ರಗತಿ, ಪೂರ್ಣಿಮಾ, ನಫೀಸಾ ಸೇರಿದಂತೆ ಹಲವು ಮಹಿಳೆಯರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.