Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
(ರಾಜ್ಯ ) ಜಿಲ್ಲೆ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಶಿವಯೋಗಿಗಳ ಪುಣ್ಯ ಕ್ಷೇತ್ರವಾದ ಅಥಣಿಯಲ್ಲಿ ಸರ್ವ ಧರ್ಮೀಯರೂ ಯಾವುದೇ ಭೇದ ಭಾವ ಇಲ್ಲದೇ ಒಗ್ಗಟ್ಟಿನಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿರುವುದು ಹೆಮ್ಮೆಯ ವಿಷಯ. ಅದೇ ಪರಂಪರೆಯನ್ನು ಮುಂದುವರಿಸಿಕೊಂಡು, ಈ ಬಾರಿಯ ಮೊಹರಂ ಹಬ್ಬವನ್ನು ಎಲ್ಲ ಸಮುದಾಯದವರು ಪರಸ್ಪರ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅಥಣಿ ಪೊಲೀಸ್ ಉಪನಿರೀಕ್ಷಕ ಗಿರಮಲಪ್ಪ ಉಪ್ಪಾರ ಮನವಿ ಮಾಡಿದರು.
ಅವರು ಪಟ್ಟಣದ ಪೋಲೀಸ್ ಸಮುದಾಯ ಭವನದಲ್ಲಿ ಮೊಹರಂ ಹಬ್ಬದ ಪ್ರಯುಕ್ತವಾಗಿ
ಆಯೋಜಿಸಲಾಗಿದ್ದ ಶಾಂತಿ ಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಅಹಿತಕರ ಘಟನೆಗಳಿಗೆ ಆಸ್ಪದ ನೀಡಬಾರದು. ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಸಹಕರಿಸಬೇಕು. ಒಂದು ವೇಳೆ ಹಬ್ಬದ ಹೆಸರಿನಲ್ಲಿ ಶಾಂತಿ ಭಂಗ ಉಂಟುಮಾಡುವ ಅಥವಾ ಅಹಿತಕರ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಎಚ್ಚರಿಕೆ ನೀಡಿದರು.
ಈ ವೇಳೆ ಮುಸ್ಲಿಂ ಸಮಾಜದ ಮುಖಂಡ ಅಸ್ಲಮ್ ನಾಲಬಂದ ಮಾತನಾಡಿ, ಅಥಣಿ ಶಾಂತಿಗೆ ಹೆಸರುವಾಸಿಯಾಗಿದೆ ಇಲ್ಲಿನ ಜನರು ಹಬ್ಬ ಹರಿದಿನಗಳಲ್ಲಿ ನಾವೆಲ್ಲರೂ ಒಂದೇ ಎನ್ನುವ ರೀತಿಯಲ್ಲಿ ಒಗ್ಗಟ್ಟಾಗಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುತ್ತಾ ಬಂದಿದ್ದೇವೆ. ಮುಂದೆಯೂ ಇದೇ ರೀತಿ ಎಲ್ಲ ಸಮುದಾಯದವರು ಸೇರಿ ಶಾಂತಿ ಸೌಹಾರ್ದತೆ ಮತ್ತು ಸಹೋದರತೆಯಿಂದ ಹಬ್ಬಗಳನ್ನು ಆಚರಿಸುತ್ತೇವೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.
ಈ ವೇಳೆ ಮುಖಂಡರಾದ ಶಶಿ ಸಾಳವೆ. ಶಬ್ಬೀರ ಸಾತಬಚ್ಚೆ, ಮಂಜು ಹೋಳಿಕಟ್ಟಿ. ರಸೂಲಸಾಬ ನದಾಫ್ ಮಾತನಾಡಿ ಮೊಹರಂ ಭಾವೈಕ್ಯತೆಯ ಹಬ್ಬವಾಗಿದ್ದು. ಇಲ್ಲಿ ಯಾವುದೇ ಕಾರಣಕ್ಕೂ ಅಹಿತಕರ ಘಟನೆಗಳು ನಡೆಯುವುದಿಲ್ಲ. ಗಂಧ ಹಾಗೂ ನೈವೇದ್ಯ ಅರ್ಪಿಸಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಭದ್ರತೆಗೆ ಹೆಚ್ಚಿನ ಪೋಲೀಸ್ ಸಿಬ್ಬಂದಿಗಳನ್ನು ಒದಗಿಸಬೇಕು. ಜನ ದಟ್ಟಣೆ ಆಗದಂತೆ ಬ್ಯಾರಿಕೇಡ್ ಹಾಕಬೇಕು ಎಂದು ಸಲಹೆ ನೀಡಿ ಮೊಹರಂ ಹಬ್ಬವನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಆಚರಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಅಂಜುಮನ್ ಕಮಿಟಿ ಅಧ್ಯಕ್ಷ ಸೈಯ್ಯದಅಮೀನ ಗದ್ಯಾಳ, ಮುಖಂಡರಾದ ಶೇಖರ್ ಸೌದಾಗರ, ಅಯಾಜ ಮಾಸ್ಟರ್, ಶಿವಾನಂದ ಸೌದಾಗರ, ಇಲಿಯಾಸ್ ಹಿಪ್ಪರಗಿ, ಜುಬೇರ್ ನಾಲಬಂದ, ಮಂಜು ಹೋಳಿಕಟ್ಟಿ, ಆಸೀಫ್ ತಾಂಬೋಳಿ, ಮಹೇಂದ್ರ ರಾಜಂಗಳೆ, ಸುಭಾಸ್ ಸಾಳುಂಕೆ. ಇಮ್ರಾನ್ ದ್ರಾಕ್ಷಿ. ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಮತ್ತು ಗಣ್ಯರು ಭಾಗವಹಿಸಿ,

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ

ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ

ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ

ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಾಸ್ತವಿಕ ಮಳೆ ಪ್ರಮಾಣದ ಬಗ್ಗೆ ತಪ್ಪು ವರದಿ :ರೈತರಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಉ.ಕದಲ್ಲಿ ಮಕ್ಕಳ ಆರೋಗ್ಯಕ್ಕೆ ಬಡತನದ ಸಂಕಟ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ & ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರೀಯ ಪಾಲ್ಗೊಳ್ಳುವಿಕೆ ಅವಶ್ಯ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ತಂಪೆರೆದ ಆಶ್ಲೇಶ ಮಳೆ
    In (ರಾಜ್ಯ ) ಜಿಲ್ಲೆ
  • ಬಿ.ಎಂ. ಮಠೋಳಿ ಗೆ ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಮೋರಟಗಿ ಗ್ರಾಪಂ ಕಸದ ವಾಹನಕ್ಕೆ ಹಿಡಿದ ಗ್ರಹಣ!
    In (ರಾಜ್ಯ ) ಜಿಲ್ಲೆ
  • ಅಗಲಿದ ಪತ್ರಕರ್ತ ಬಾಬು ಮುರಾಳರಿಗೆ ಕಾನಿಪದಿಂದ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ತಾಳಿಕೋಟೆಯಲ್ಲಿ ಆ.10ರಂದು ಬೃಹತ್ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಆನ್ ಲೈನ್-ಆಪ್ ಲೈನ್ ಮಾರುಕಟ್ಟೆ: ಒಣದ್ರಾಕ್ಷಿ ವಹಿವಾಟು ಭಾರಿ ಏರಿಕೆ
    In (ರಾಜ್ಯ ) ಜಿಲ್ಲೆ
  • ಇಂದು ಬರಪೀಡಿತ ಸ್ಥಳಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.