Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಭಾರತೀಯ ಜನತಾ ಪಕ್ಷದ ಚಡಚಣ ಮಂಡಲ ವತಿಯಿಂದ ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳು ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನ ಕುರಿತು ಮಹತ್ವದ ಸಭೆ ಶನಿವಾರ ಚಡಚಣ ಚೌಡೇಶ್ವರಿ ಮಂಗಲ ಕಾರ್ಯಾಲಯದಲ್ಲಿ ನಡೆಯಿತು.
ಶ್ರೀ ಯೋಗಾನಂದ ಸ್ವಾಮಿಗಳಿಂದ ಸಸಿಗೆ ನೀರುಣಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಚಡಚಣ ಮಂಡಲ ಅಧ್ಯಕ್ಷ ಚಂದ್ರಕಾಂತ ಗೌಡ ಪಾಟೀಲ ವಹಿಸಿದ್ದರು.
ಸಭೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದ ರಮೇಶ್ ಜಿಗಜಿಣಗಿ ಮಾತನಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 12 ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಬಡವರ ಕಲ್ಯಾಣ, ರೈತರ ಸಬಲೀಕರಣ, ಮಹಿಳಾ ಸಶಕ್ತೀಕರಣ, ಡಿಜಿಟಲ್ ಭಾರತ, ಮೂಲಸೌಕರ್ಯ ಅಭಿವೃದ್ಧಿ, ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಲಾಗಿದೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದ ಕುರಿತು ಕಾರ್ಯಕರ್ತರಿಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಹಲವು ಮುಖಂಡರು ಕಾರ್ಯಕ್ರಮದ ಕುರಿತು ಮಾತನಾಡಿದರು.
ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕ ಕಾಯ್ದುಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.
ಕಾರ್ಯಕ್ರಮದಲ್ಲಿ ನಾಗಠಾಣ ವಿಧಾನಸಭಾ ಕ್ಷೇತ್ರದ ಮುಖಂಡ ಸಂಜಯ ಐಹೊಳೆ, ಉಮೇಶ್ ಕಾರಜೋಳ, ಮಹೇಂದ್ರಕುಮಾರ ನಾಯಕ್, ಚಡಚಣ ಪ.ಪಂ.ಅಧ್ಯಕ್ಷ ಮಲ್ಲಿಕಾರ್ಜುನ ಧೋತ್ರೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ

ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ

ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ

ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಎಸ್‌ಐಆರ್ ಬಗ್ಗೆ ಜನರಿಗೆ ಮನವರಿಕೆ ಮಾಡಿ :ಸಂಸದ ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
  • ಮೊಹರಂ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ :ಪಿಎಸೈ ಉಪ್ಪಾರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗನಿರೋಧಕ ಶಕ್ತಿ ವೃದ್ಧಿ :ವಿಜಯಲಕ್ಷ್ಮಿ ಗಿರಗಾವಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಸದ್ದಿಲ್ಲದೆ ಜಲಯೋಗದ ಸಾಧನೆ ಗೈದ ಪತ್ರಕರ್ತ ಸುನೀಲ ಗೋಡೆನ್ನವರ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ
    In ವಿಶೇಷ ಲೇಖನ
  • ನೆನಪಿನ ಗೂಡಲಿ ಒಲವಿನ ಬೆಳಕು
    In ವಿಶೇಷ ಲೇಖನ
  • ಅಪ್ಪನೆಂದರೆ ಆಲದ ಮರ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 20, 2026
    In ದಿನಪತ್ರಿಕೆ
  • ಆಲಮಟ್ಟಿ ನೀರಿನ ಹಕ್ಕಿಗಾಗಿ ಹೋರಾಟ ತೀವ್ರ :ಸಂಸದರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.