ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಜುಲೈ ೧ ರಿಂದ ೩೧ರವರೆಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಭಿಯಾನದಡಿ ಜಿಲ್ಲೆಯ ಅರ್ಹ ಹಿರಿಯ ನಾಗರಿಕರನ್ನು ಗುರುತಿಸಿ, ಸೇವಾಸಿಂಧು ಪೋರ್ಟಲ್ ಮೂಲಕ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಸಿ, ಗುರುತಿನ ಚೀಟಿಗಳನ್ನು ವ್ಯವಸ್ಥಿತವಾಗಿ ಹಾಗೂ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿತರಿಸಲಾಗುವುದು. ಈ ಅವಧಿಯಲ್ಲಿ ಎಲ್ಲಾ ಹಿರಿಯ ನಾಗರಿಕರ ಹೊಸದಾಗಿ ಅರ್ಜಿ ಸಲ್ಲಿಸಲು, ಅಗತ್ಯ ದಾಖಲೆಗಳ ಪರಿಶೀಲನೆಗೆ ಹಾಗೂ ಸಂಬಂಧಿತ ಸೇವೆಗಳನ್ನು ಸುಲಭವಾಗು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಹಿರಿಯ ನಾಗರಿಕರು ಸರ್ಕಾರದ ವಿವಿಧ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಗುರುತಿನ ಚೀಟಿ ಅತ್ಯಗತ್ಯವಾಗಿದ್ದು, ಇನ್ನೂ ಗುರುತಿನ ಚೀಟಿ ಪಡೆಯದ ಎಲ್ಲಾ ಅರ್ಹ ಹಿರಿಯ ನಾಗರಿಕರು ಈ ವಿಶೇಷ ಅಭಿಯಾನದ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
