ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜೂನ್ ೨೧ರಂದು ನೀಟ್ ಪರೀಕ್ಷೆಯು ವಿಜಯಪುರ ನಗರದ ಒಟ್ಟು ೧೯ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ೨೦೦ ಮೀ ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್ ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಿಗ್ಗೆ ೯:೩೦ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ತೆರೆಯದಂತೆ ಆದೇಶಿಸಲಾಗಿದೆ.
ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

