Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
(ರಾಜ್ಯ ) ಜಿಲ್ಲೆ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ನೈಡೆಕ್ ಕಂಪನಿ ಕ್ಯಾಂಪಸ್ ಸಂದರ್ಶನ | ಸಚಿವ ಎಂ ಬಿ ಪಾಟೀಲ ಸಂತಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಹುಬ್ಬಳ್ಳಿಯಲ್ಲಿ ನೆಲೆಯೂರಿರುವ ಜಪಾನ್ ಮೂಲದ ಪ್ರತಿಷ್ಠಿತ ನೈಡೆಕ್ ಕಂಪನಿಯು ನಡೆಸಿದ ಎರಡು ದಿನಗಳ ಕ್ಯಾಂಪಸ್ ಸಂದರ್ಶನದಲ್ಲಿ ತಮ್ಮ ನೇತೃತ್ವದ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 94 ವಿದ್ಯಾರ್ಥಿಗಳಿಗೆ ಉದ್ಯೋಗ ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕೈಗಾರಿಕಾ ಬೆಳವಣಿಗೆಯ ಮೂಲಕ ಉತ್ತರ ಕರ್ನಾಟಕದ ಪ್ರಗತಿಗೆ ಶ್ರಮಿಸಲಾಗುತ್ತಿದೆ. ಇದರ ಲಾಭವು ವಿಜಯಪುರ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ ಹೀಗೆ ಈ ಭಾಗದ ಹಲವು ಜಿಲ್ಲೆಗಳ ಯುವಜನರಿಗೆ ಸಿಕ್ಕುತ್ತಿದೆ. ನೈಡೆಕ್ ಕಂಪನಿ ನಡೆಸಿರುವ ಕ್ಯಾಂಪಸ್ ಸಂದರ್ಶನ ಇದಕ್ಕೊಂದು ನಿದರ್ಶನವಾಗಿದೆ ಎಂದಿದ್ದಾರೆ.
ತಾವು ಕೈಗಾರಿಕಾ ಸಚಿವರಾದ ಬಳಿಕ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಇಲಾಖೆಯ ಮೂಲಕವೂ ಹಲವು ಉಪಕ್ರಮಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನೈಡೆಕ್ ಸಂಸ್ಥೆಗೆ ತಾವು ಕೈಗಾರಿಕಾ ಸಚಿವನಾದ ಮೇಲೆ ಧಾರವಾಡ ಸಮೀಪ ಭೂಮಿ‌ ಒದಗಿಸಿ, ಅಲ್ಲಿ ವಿದ್ಯುಚ್ಚಾಲಿತ ವಾಹನಗಳ ಮೋಟಾರು ತಯಾರಿಕೆಗೆ ಚಾಲನೆ ನೀಡಲಾಗಿದೆ. ಆ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಮಕ್ಕಳಿಗೆ ಹೆಚ್ಚಿನ ಉದ್ಯೋಗ ನೀಡಬೇಕು ಎಂದು ಸಲಹೆ ನೀಡಿದ್ದೆ. ಆ ಪ್ರಕಾರ ಸಂಸ್ಥೆಯವರು ಮಾಡಿ ತೋರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನೈಡೆಕ್ ಸಂಸ್ಥೆಯ ಉನ್ನತಾಧಿಕಾರಿಗಳ ತಂಡವು ಜೂನ್ 16 ಮತ್ತು 17ರಂದು ಎರಡು ದಿನಗಳ ಕಾಲ ಕ್ಯಾಂಪಸ್ ಸಂದರ್ಶನ ನಡೆಸಿತು. ಇದರಲ್ಲಿ ಒಟ್ಟು 110 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮವಾಗಿ 46 ಡಿಪ್ಲೊಮಾ ಮತ್ತು 48 ಐಟಿಐ ಪದವೀಧರರು ಆಯ್ಕೆಯಾದರು. ಇವರೆಲ್ಲರಿಗೂ ನೈಡೆಕ್ ಕಂಪನಿ ಆಕರ್ಷಕ ವೇತನದ ಉದ್ಯೋಗಗಳನ್ನು ನೀಡಿದೆ. ಇದಕ್ಕಾಗಿ ಕಂಪನಿಗೂ ಅಭಿನಂದನೆಗಳು ಸಲ್ಲುತ್ತವೆ ಎಂದು ಅವರು ಹೇಳಿದ್ದಾರೆ.
ಎಲೆಕ್ಟ್ರಿಕಲ್, ಎಂಜಿನಿಯರಿಂಗ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಾನಿಕ್ ವಿಭಾಗಗಳ ಅರ್ಹ ವಿದ್ಯಾರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದರು. ತಮ್ಮ ಊರಿನ ಹತ್ತಿರದಲ್ಲೇ ಈಗ ಉದ್ಯೋಗಾವಕಾಶ ದೊರೆಯುತ್ತಿರುವುದು ಸಂತಸಕ್ಕೆ ಕಾರಣಾವಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ನೈಡೆಕ್ ಕಂಪನಿಯ ಅಧಿಕಾರಿಗಳಾದ ಸೋಮಶೇಖರ್, ಮಂಜುನಾಥ್, ಚಂದನಾ ಮತ್ತು ನಿಶ್ಮಿಕಾ ಅವರು ಕ್ಯಾಂಪಸ್ ಸಂದರ್ಶನ ನಡೆಸಿದರು. ಕಾಲೇಜಿನ ಪ್ರಾಂಶುಪಾಲ ಪ್ರಭುದೇವ ಕಳಸಗೊಂಡ, ಉದ್ಯೋಗಾಧಿಕಾರಿ ಸುಧನ್ವ ಕುಲಕರ್ಣಿ, ಐಟಿಐ ಉದ್ಯೋಗಾಧಿಕಾರಿ ವಾಗೀಶ ಮರೀಮಠ ಕೂಡ ಸಮನ್ವಯಾಧಿಕಾರಿಗಳಾಗಿ ಇದ್ದರು ಎಂದು ಅವರು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.