ವಿಜಯಪುರ: ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ-ಸAಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನಲೆಯಲ್ಲಿ ವಿಶ್ವ ಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.
ಈ ಪ್ರಕಟಣೆಯ ೧೫ ದಿನಗಳೊಳಗಾಗಿ ವಿಶ್ವಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Related Posts
Add A Comment