ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಇಲ್ಲಿನ ಸಂಗಮೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ಪತ್ರಕರ್ತ ಮಲ್ಲಿಕಾರ್ಜುನ ಕುಬಕಡ್ಡಿ ಅವರು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ, ಅಂತರರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವತಿಯಿಂದ ನೀಡಲಾಗುವ 2026ನೇ ಸಾಲಿನ ‘ಭಾರತ ಭೂಷಣ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಸಾಗರ ಕಲಾದಗಿ ತಿಳಿಸಿದ್ದಾರೆ.
ಜೂನ್ 24ರಂದು ಬಾಗಲಕೋಟೆಯ ಲಯನ್ಸ್ ಕ್ಲಬ್ ಸಭಾಭವನದಲ್ಲಿ ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ಹಾಗೂ ವಿಜಯಪುರ ಜಿಲ್ಲಾ ವಿದ್ಯಾರ್ಥಿ ಪರಿಷತ್ ಸಂಯುಕ್ತವಾಗಿ ಆಯೋಜಿಸಿರುವ ‘ಸಂಸ್ಕೃತ ಸಿರಿ ಉತ್ಸವ’ ಮತ್ತು ರಾಷ್ಟ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನವಾಗಲಿದೆ.

