ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ APMC ಯೋಗಾ ಗ್ರೂಪ್ ನವರಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆರೋಜಿಸಲಾಗಿತ್ತು.
ಈ ವೇಳೆ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾತನಾಡಿ, ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅವಿರತ ಶ್ರಮದಿಂದಾಗಿ ಇಂದು ಭಾರತದ ಈ ಪ್ರಾಚೀನ ಕಲೆ ಜಗತ್ತಿನಾದ್ಯಂತ ಪಸರಿಸಿದೆ. ಇಂದು ಇಡೀ ವಿಶ್ವವೇ ಭಾರತದ ಕಡೆ ಮುಖ ಮಾಡಿ ಯೋಗವನ್ನು ಅಪ್ಪಿಕೊಳ್ಳುತ್ತಿದೆ ಎಂದರೆ ಅದಕ್ಕೆ ನಮ್ಮ ಸಂಸ್ಕೃತಿಯಲ್ಲಿರುವ ಶಕ್ತಿಯೇ ಕಾರಣ. ನಮ್ಮ ಯುವ ಪೀಳಿಗೆ ಮೊಬೈಲ್ ಮತ್ತು ಕೆಟ್ಟ ಹವ್ಯಾಸಗಳಿಗೆ ಬಲಿಯಾಗದೆ, ಯೋಗ ಮತ್ತು ಸದೃಢ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಸಿಂದಗಿ ಮತಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲೂ ಇಂತಹ ಯೋಗ ಶಿಬಿರಗಳು ನಡೆಯಬೇಕು ಎನ್ನುವುದು ನನ್ನ ಆಸೆ ಎಂದರು.
ರುದ್ರಯ್ಯಸ್ವಾಮಿ ಹಿರೇಮಠ ಸ್ವಾಗತಿಸಿದರು. ಶಿಕ್ಷಕ ಸಂಗಮೇಶ ಕಕ್ಕಸಗೇರಿ ವಂದಿಸಿದರು.
ಗಣ್ಯರಾದ ಅಶೋಕ ವಾರದ, ಡಾ.ಗಿರೀಶ ಕುಲಕರ್ಣಿ, ಡಾ.ರವಿ ಗೋಲಾ, ಡಾ.ಚಿದಾನಂಜ ಅಳಗುಂಡಗಿ, ಶರಣಯ್ಯ ಹಿರೇಮಠ, ಮಹಾಂತೇಶ ಪಟ್ಟಣಶೆಟ್ಟಿ, ಬೋಜಪ್ಪ ಸಂಗಮ, ಸಿದ್ಧರಾಮ ಪಾಟೀಲ ಸೇರಿದಂತೆ ಅನೇಕರಿದ್ದರು.

