ವಿಜಯಪುರ: ನಗರದ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ ಮಾಡಲು ಸಂಘ-ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವ ಹಿನ್ನಲೆಯಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ.
ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರನ್ನು ನಾಮಕರಣ ಮಾಡುವ ಕುರಿತು ಸ್ಪಷ್ಟ ಅಭಿಪ್ರಾಯವನ್ನು ಈ ಪ್ರಕಟಣೆಯ ೧೫ ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೈಲು ನಿಲ್ದಾಣಕ್ಕೆ ಸಿದ್ದೇಶ್ವರ ಶ್ರೀ ನಾಮಕರಣ :ಅಭಿಪ್ರಾಯಗಳ ಆಹ್ವಾನ
Related Posts
Add A Comment