Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
(ರಾಜ್ಯ ) ಜಿಲ್ಲೆ

ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರತಿನಿತ್ಯ ಎಲ್ಲರೂ ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಶಿಕ್ಷಕ ಸಿದ್ದು ಚಿಂಚೋಳಿ ಹೇಳಿದರು.
ಸಿಂದಗಿ ತಾಲೂಕಿನ ಬ್ಯಾಲಿಹಾಳ–ಬಂಕಲಗಿ ಸರಕಾರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಯೋಗವು ಕೇವಲ ವ್ಯಾಯಾಮವಲ್ಲ. ಅದು ಆರೋಗ್ಯಕರ, ಸಂತೋಷಕರ ಮತ್ತು ಸಮತೋಲಿತ ಜೀವನದ ಮಾರ್ಗವಾಗಿದೆ. ಯೋಗವು ದೈಹಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಚಿಂತನೆಯನ್ನು ಬೆಳೆಸುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ನೂಲಾನವರ, ವರದಿಗಾರ ಶಿವಾನಂದ ಆಲಮೇಲ ಮಾತನಾಡಿ, ಯೋಗವು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಕಾಪಾಡುವುದಲ್ಲದೆ ದೇಹಕ್ಕೆ ಚೈತನ್ಯ ಮತ್ತು ಶಕ್ತಿಯನ್ನು ನೀಡುತ್ತದೆ. ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ಯೋಗದ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಯೋಗಾಭ್ಯಾಸವನ್ನು ರೂಢಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಹೇಳಿದರು.
ಈ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಆನಂದ ಶಾಬಾದಿ, ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಭಜಂತ್ರಿ, ಮುಖ್ಯೋಪಾಧ್ಯಾಯರಾದ ವಿ.ಎಸ್.ಪಾಟೀಲ, ಎಸ್.ಬಿ.ಪಾಟೀಲ, ಸುಖದೇವ ಹಿರೇಕುರುಬರ, ಶಿಕ್ಷಕರಾದ ಹಮೀದ್ ಅವಟಿ, ರೋಹಿತ ತಳಗೇರಿ, ರಮೇಶ ಪಾಳೇದ, ಶೈಲಾ ಪತ್ತಾರ ಸೇರಿದಂತೆ ಹಲವರು ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಸೂರ್ಯ ನಮಸ್ಕಾರದ ಪ್ರದರ್ಶನ ನೀಡಿದರು. ಯೋಗ ಶಿಕ್ಷಕ ಸಿದ್ಧಲಿಂಗ ಚೌಧರಿ ಅವರ ಮಾರ್ಗದರ್ಶನದಲ್ಲಿ ಸಾಮೂಹಿಕ ಯೋಗಾಭ್ಯಾಸ ನಡೆಸಲಾಯಿತು. ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗದ ಮಹತ್ವದ ಕುರಿತು ಅರಿವು ಪಡೆದರು.
ಕೊನೆಯಲ್ಲಿ ಎಲ್ಲರೂ ಪ್ರತಿದಿನ ಯೋಗಾಭ್ಯಾಸ ಮಾಡುವ ಸಂಕಲ್ಪ ಕೈಗೊಂಡರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.