ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳ ವಿಮೆಗಾಗಿ ಅರ್ಜಿ ಸಲ್ಲಿಸಲು ಕೃಷಿ ಸಹಾಯಕ ನಿರ್ದೇಶಕ ಪ್ರಶಾಂತ ಸಾಣಿ ತಿಳಸಿದ್ದಾರೆ.
ಈ ಯೋಜನೆಯ ಸೌಲಭ್ಯ ಪಡೆಯಲು ರೈತರು ಉದ್ದ ಮತ್ತು ಹೆಸರಿನ ಬೆಳೆಗಳಿಗೆ ಜುಲೈ ೧೫, ಸೂರ್ಯಕಾಂತಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ ಬೆಳೆಗಳಿಗೆ ಜುಲೈ ೩೧ ಮತ್ತು ನೀರಾವರಿ ಸೂರ್ಯಕಾಂತಿ ಬೆಳೆಗೆ ಆಗಸ್ಟ್ ೧೪ ಕೊನೆಯ ದಿನವಾಗಿರುತ್ತದೆ. ಆಸಕ್ತ ರೈತರು ನಿಗದಿತ ಅವಧಿಯೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಶಾಂತ ಸಾಣಿ ಮನವಿ ಮಾಡಿದ್ದಾರೆ.

