Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ :ವೆಂಕಟೇಶ್
(ರಾಜ್ಯ ) ಜಿಲ್ಲೆ

ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ :ವೆಂಕಟೇಶ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ :ಬೂತ್ ಮಟ್ಟದಿಂದ ಪಕ್ಷವನ್ನು ಬಲಪಡಿಸಿ, ಮುಂಬರುವ ಸ್ಥಳೀಯ ಚುನಾವಣೆ ಹಾಗೂ 2028 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ನೂತನ ಬಿಜೆಪಿ ಮಂಡಲ ತಾಲೂಕು ಅಧ್ಯಕ್ಷ ಟಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಶಂಭೆಗೌಡರಿಂದ ಅಧಿಕಾರ ಸ್ವೀಕರಿಸಿ ಮಾತನಾಡಿದರು. ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಪಕ್ಷ ನನಗೆ ಅಧ್ಯಕ್ಷರ ಹುದ್ದೆ ನೀಡಿದೆ.ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನಾ ಕಾರ್ಯ ಮಾಡುತ್ತೇನೆ. ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸಿ, ಗ್ರಾಮ ಮಟ್ಟದಿಂದಲೇ ಪಕ್ಷದ ಸಂಘಟನೆಯನ್ನು ಬಲಪಡಿಸುವ ಕೆಲಸಕ್ಕೆ ಆದ್ಯತೆ ನೀಡಲಾಗುವುದು. ಹಿರಿಯ ಮುಖಂಡರ ಮಾರ್ಗದರ್ಶನದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಲು ಪ್ರಯತ್ನಿಸಲಾಗುವುದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ತಾಲ್ಲೂಕಿನಲ್ಲಿ ದ್ವಿತೀಯ ಸ್ಥಾನ ಪಡೆದಿತ್ತು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ವಿಧಾನಸೌಧಕ್ಕೆ ಕಳುಹಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪರೀಕ್ಷಿತರಾಜೇ ಅರಸ್ ಮಾತನಾಡಿ, ಬಿಜೆಪಿ ಪಕ್ಷವು ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ನಿರಂತರವಾಗಿ ತನ್ನ ಮತಬಲವನ್ನು ಹೆಚ್ಚಿಸಿಕೊಳ್ಳುತ್ತಾ ಬಂದಿದೆ. ಇಂತಹ ಸಂದರ್ಭದಲ್ಲಿ ಪಕ್ಷವನ್ನು ಮತ್ತಷ್ಟು ಸಂಘಟಿತವಾಗಿ ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ಟಿ. ವೆಂಕಟೇಶ್ ಅವರನ್ನು ಮಂಡಲ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಪಕ್ಷದ ಸಿದ್ಧಾಂತದಂತೆ ಪ್ರತಿಯೊಬ್ಬ ಕಾರ್ಯಕರ್ತನಿಗೂ ಗೌರವ ದೊರೆಯಬೇಕು. ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಿದಾಗ ಮಾತ್ರ ಆಡಳಿತದ ಗುರಿ ಸಾಧಿಸಲು ಸಾಧ್ಯವಾಗುತ್ತದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶಾಸಕರನ್ನಾಗಿ ಕಳುಹಿಸುವ ಸಂಕಲ್ಪ ಹೊಂದಿದ್ದು, ಕಾರ್ಯಕರ್ತರ ಸಹಕಾರದಿಂದ ಅದು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಎಚ್ ಸಿ ಲಕ್ಷ್ಮಣ್, ಮನುಗನಹಳ್ಳಿ ಮಂಜುನಾಥ್, ಮೊತ್ತ ಬಸವರಾಜಪ್ಪ, ಸರಗೂರು ಅಧ್ಯಕ್ಷ ಸಿ ಕೆ ಗಿರೀಶ್,
ಪ್ರಧಾನ ಕಾರ್ಯದರ್ಶಿ ಗುರುಸ್ವಾಮಿ, ಬಿಡಗಲು ರಾಜು, ನಿಕಟ ಪೂರ್ವ ಅಧ್ಯಕ್ಷ ಶಂಭೇಗೌಡ,
ವೈ.ಟಿ ಮಹೇಶ್, ಪಿ.ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ್, ಚಂದ್ರಮೌಳಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮಂಜುನಾಥ್, ವಿವೇಕಾನಂದ, ಪರಮೇಶ್ವರ್, ಗೋಪಾಲಯ್ಯ,
ಕೆ.ಲೋಕೇಶ್, ಮೋರ್ಚಾ ಅಧ್ಯಕ್ಷರುಗಳಾದ ಪೃಥ್ವಿ ಕುಮಾರ್, ಪುಟ್ಟಸ್ವಾಮಿ, ಬಾಲರಾಜು, ಬಸವರಾಜಚಾರಿ, ಹೊಸಹಳ್ಳಿ, ಕುಮಾರ್, ಭೀಮನಹಳ್ಳಿ ಸೋಮೇಶ್, ವೃಷಭೇಂದ್ರ, ಚಂದ್ರು, ರಾಜೇಂದ್ರ, ಮಂಜುಳಾ, ರಾಮಚಂದ್ರಣ್ಣ, ಸಿದ್ದಯ್ಯ, ಸಿಂಗಯ್ಯ, ಮಗ್ಗೆ ಪ್ರಕಾಶ್, ಜವರಯ್ಯ, ಬಸವರಾಜು, ಸೋಮಚಾರಿ, ನಾಗರಾಜ್, ರಾಮು, ರಾಜಣ್ಣ, ಶ್ರೀರಾಮುಲು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.