ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳ ಮಾಹಿತಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿರುವ ಮಾಹಿತಿ ಹಕ್ಕು ಕಾಯ್ದೆಯಡಿ ಆಯೋಗದ ಬೆಳಗಾವಿ ಪೀಠದಲ್ಲಿ ನಿತ್ಯ ಸುಮಾರು ೬೦-೧೦೦ ಅರ್ಜಿಗಳ ವಿಚಾರಣೆ ಆಫ್ ಲೈನ್ ಹಾಗೂ ಆನ್ ಲೈನ್ ನಲ್ಲಿ ನಡೆಯುತ್ತಿವೆ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಪ್ರಕಾಶ ನಾರಾಯಣ ಚನ್ನಾಳ ತಿಳಿಸಿದ್ದಾರೆ.
ಮಾಹಿತಿ ಹಕ್ಕು ಅಧಿನಿಯಮ ಮಾಹಿತಿಯನ್ನು ಸಾಮಾನ್ಯ ಜನರಿಗೆ ನೀಡದಿರುವುದು. ವಿಚಾರಣೆಗೆ ಗೈರು ಹಾಜರಾಗಿರುವುದು ಹಾಗೂ ಆಯೋಗದ ನೋಟಿಸ್ ಗಳಿಗೆ ಸ್ಪಂದಿಸದಿರುವ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಶಿಸ್ತು ಕ್ರಮ ಜರುಗಿಸಲಾಗುವುದು. ವಿಚಾರಣೆ ಸಮಿತಿಯ ಶಿಫಾರಸ್ಸಿನನ್ವಯ ೨೫ ಸಾವಿರ ರೂ. ವರೆಗೆ ದಂಡ ಮತ್ತು ಅರ್ಜಿದಾರರಿಗೆ ಪರಿಹಾರದ ಆದೇಶ ನೀಡಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಸ್ವತಂತ್ರ ಭಾರತದಲ್ಲಿ ಸಾಮಾನ್ಯ ಜನರಿಗೆ ಸರ್ಕಾರದ ಮಾಹಿತಿ ಸುಲಭವಾಗಿ ತಲುಪಬೇಕೆಂಬ ಉದ್ದೇಶ ಹೊಂದಿರುವ ಅತ್ಯಂತ ಕ್ರಾಂತಿಕಾರಕ ಕಾಯ್ದೆ ಇದಾಗಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಪ್ರಕಾಶ ನಾರಾಯಣ ಚನ್ನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

