Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
(ರಾಜ್ಯ ) ಜಿಲ್ಲೆ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಯೋಗವು ನಮ್ಮ ಬದುಕಿನಲ್ಲಿ ಹೊಸ ಆಯಾಮವನ್ನು ತಂದುಕೊಡುವುದರ ಜೊತೆಗೆ ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡುತ್ತದೆ. ಆದ್ದರಿಂದ ಯೋಗವನ್ನು ಕೇವಲ ವಿಶ್ವ ಯೋಗ ದಿನಾಚರಣೆಗೆ ಸೀಮಿತಗೊಳಿಸದೆ, ವರ್ಷದ ಎಲ್ಲಾ ದಿನಗಳಲ್ಲೂ ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಥಣಿ ಪಟ್ಟಣದ ಎಸ್.ಎಸ್.ಎಂ.ಎಸ್. ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಬದಲಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಿಂದ ಜನರು ವಿವಿಧ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಆರೋಗ್ಯಕರ ಮತ್ತು ರೋಗಮುಕ್ತ ಜೀವನ ನಡೆಸಬೇಕಾದರೆ ಪ್ರತಿದಿನ ಯೋಗಾಭ್ಯಾಸವನ್ನು ರೂಢಿಸಿಕೊಳ್ಳುವುದು ಅವಶ್ಯಕ ಎಂದು ಹೇಳಿದರು.
ನಂತರ ಮಾತನಾಡಿದ ತಹಸೀಲ್ದಾರ್ ಸಿದ್ರಾಯ ಬೋಸಗಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.
ಇಂದಿನ ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅತ್ಯಂತ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಪ್ರತಿದಿನ ಸ್ವಲ್ಪ ಸಮಯವನ್ನು ಯೋಗಕ್ಕಾಗಿ ಮೀಸಲಿಡಬೇಕು. ಯೋಗದಿಂದ ದೇಹದ ರೋಗನಿರೋಧಕ ಶಕ್ತಿ ವೃದ್ಧಿಯಾಗುವುದರ ಜೊತೆಗೆ ಮನಸ್ಸಿನ ಏಕಾಗ್ರತೆ ಹೆಚ್ಚುತ್ತದೆ. ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಯೋಗವನ್ನು ತಮ್ಮ ದಿನಚರಿಯ ಭಾಗವನ್ನಾಗಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಶಿವಾನಂದ ಕಲ್ಲಾಪುರ, ಡಿಎಸ್ಪಿ ಪ್ರಶಾಂತ ಮುನ್ನೊಳಿ,ಎಂ.ಆರ್.ಮುಂಜಿ, ಅಶೋಕ ಗುಡಿಮನಿ, ಪ್ರವೀಣ ಹುಣಸಿಕಟ್ಟಿ, ಬಿ.ಜಿ.ಕಾಗೆ, ಮಲ್ಲಿಕಾರ್ಜುನ ಮಗದೂಮ, ಸಿಪಿಐ.ಸಂತೋಷ ಹಳ್ಳೂರ, ಡಾ.ಮಲ್ಲಿಕಾರ್ಜುನ ಹಂಜಿ, ರಾಮಣ್ಣ ಧರಿಗೌಡ, ಶಿವಾನಂದ ಮಾಳಗಾಂವಿ, ಸುರೇಶ ಚಿಕ್ಕಟಿ,ವಿವಿಧ ಯೋಗಾಸನಗಳ ಪ್ರದರ್ಶನ ನಡೆಯಿತು. ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
ಅಂತರಾಷ್ಟ್ರೀಯ ಯೋಗ ಗುರು ಭವರಲಾಲ ಆರ್ಯ ಅವರು ಯೋಗಾಸನವನ್ನು ಹೇಳಿಕೊಟ್ಟರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.