Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
(ರಾಜ್ಯ ) ಜಿಲ್ಲೆ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ | ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು | ಚಡಚಣ ಸಿಪಿಐ ಪರಶುರಾಮ ಮನಗೂಳಿ &ಸಿಬ್ಬಂದಿ ಸಾಹಸ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ ಬಲಗಾಲಿಗೆ ಗುಂಡು ಹಾರಿಸಿದ್ದು, ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಶೇಖರ್ ಪವಾರ್ ಹಾಗೂ ವಿಜಯಕುಮಾರ್ ಬನಸೋಡೆ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಆರೋಪಿ ಮಹೇಶ್ ತಳವಾರನಿಗೂ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ


ಕಳೆದ ಮೇ 29ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದ ಸಮೀಪದ ಜಮೀನಿನಲ್ಲಿ ನಿರಾಳೆ ಕುಟುಂಬದ ಐವರು ಸೇರಿದಂತೆ ಒಟ್ಟು ಆರು ಜನರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು.
ಪ್ರಾಥಮಿಕ ತನಿಖೆಯ ಪ್ರಕಾರ, ಹತ್ಯೆ ನಡೆಸಲು ಸುಮಾರು ₹15 ಲಕ್ಷ ಸುಪಾರಿ ಪಡೆದಿದ್ದ ಮಹೇಶ್ ತಳವಾರ ತನ್ನ ಸಹಚರರನ್ನು ಸೇರಿಸಿಕೊಂಡು ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಸುಮಾರು 23 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.