ಬಸವನಬಾಗೇವಾಡಿ: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.೩೫ ರಿಂದ ೩೮.೭೫ ಕ್ಕೆ ಸರ್ಕಾರ ಹೆಚ್ಚಳ ಮಾಡಿರುವದಕ್ಕೆ ಸಮಸ್ತ ನೌಕರ ಬಾಂಧವರಿಗೆ ಸಂತಸ ತಂದಿದೆ. ತುಟ್ಟಿಭತ್ಯೆ ಹೆಚ್ಚಳ ಮಾಡಿರುವದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಅವರ ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ, ಎಲ್ಲ ಅಧಿಕಾರಿ ವೃಂದಕ್ಕೆ, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರಿಗೆ ತಾಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹಾಗೂ ಸಂಘದ ಪದಾಧಿಕಾರಿಗಳು ತಾಲೂಕಿನ ಸಮಸ್ತ ನೌಕರ ಬಾಂಧವರ ಪರವಾಗಿ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment