Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ
(ರಾಜ್ಯ ) ಜಿಲ್ಲೆ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸಾರ್ವಜನಿಕರಿಗೆ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಹಿನ್ನೆಲ್ಲೆಯಲ್ಲಿ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಜಾಥಾ, ವಿಚಾರ ಸಂಕಿರಣ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ ದಿನ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಮಾದಕ ದ್ರವ್ಯಗಳ ವ್ಯಸನವು ಇಂದು ಸಮಾಜ ಎದುರಿಸುತ್ತಿರುವ ಗಂಭೀರ ಸಮಸ್ಯೆಯಾಗಿದ್ದು, ಯುವಜನತೆ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುವಂತಹ ದುಷ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಮೇಲೆಯೂ ದುಷ್ಪರಿಣಾಮ ಬೀರುತ್ತದೆ. ಇದರಿಂದ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ ಎಂದು ಹೇಳಿದರು.
ಯುವಕರು ಮಾದಕ ವಸ್ತುಗಳ ಆಕರ್ಷಣೆಗೆ ಒಳಗಾಗದೇ ಶಿಕ್ಷಣ, ಕ್ರೀಡೆ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಟೆಲಿಮನಸ್ಸ ಟೋಲ್-ಫ್ರೀ ಮಾನಸಿಕ ಆರೋಗ್ಯದ ಸಹಾಯವಾಣಿ ಸಂಖ್ಯೆ ೧೪೪೧೬ ಉಚಿತ ಕರೆಮಾಡುವ ಮೂಲಕ ಕನ್ನಡ ಭಾಷೆಯಲ್ಲಿಯೂ ಸಹಾಯ ಮಾಡುವ ಈ ಸಹಾಯವಾಣಿಗೆ ಕರೆ ಮಾಡಿ ತಮ್ಮ ಎಲ್ಲ ತರಹದ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು, ಇದರ ಪ್ರಯೋಜನ ಪಡೆಯಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ,ಸಿಪಿಐ ಆರೀಪ್ ಮುಷಾಪುರಿ, ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಡಾ.ಎಲ್.ಎಚ್ ಬಿದರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದ್ದರು.

ಪ್ರತಿಜ್ಞಾವಿಧಿ ಬೋಧನೆ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಜನಜಾಗೃತಿ ಜಾಥಾ ಗೆ ಚಾಲನೆ

ನಗರದ ಶ್ರೀ ಸಿದ್ಧೇಶ್ವರ ದೇವಾಸ್ಥಾನದ ಆವರಣದಲ್ಲಿ ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ ಅಂಗವಾಗಿ ನಡೆದ ಜನ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಜಂಟಿಯಾಗಿ ಚಾಲನೆ ನೀಡಿದರು.

ಪೊಲೀಸ್ ಇಲಾಖೆಯಿಂದ ವಾರಪೂರ್ತಿ ಜಾಗೃತಿ ಅಭಿಯಾನ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈಗಾಗಲೇ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕರಪತ್ರ ವಿತರಣೆ, ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಅಭಿಯಾನ, ವಿಚಾರ ಸಂಕಿರಣಗಳು ಹಾಗೂ ವಿವಿಧ ಸ್ಪರ್ಧೆಗಳ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಮಾದಕ ದ್ರವ್ಯಗಳ ವಿರುದ್ಧದ ಅಭಿಯಾನ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ, ಅದು ಸಮಾಜದ ಪ್ರತಿಯೊಬ್ಬರ ಹೋರಾಟವಾಗಬೇಕು ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026

ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 08, 2026
    In ದಿನಪತ್ರಿಕೆ
  • ಕ್ರೀಡೆಗಳು ಆರೋಗ್ಯವನ್ನು ಕಾಪಾಡುವ ನಾಟಿ ಔಷಧಿ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಸ್ವಾತಂತ್ರೋತ್ಸವಅರ್ಥಪೂರ್ಣ ಆಚರಣೆಗೆ ಕರೆ
    In (ರಾಜ್ಯ ) ಜಿಲ್ಲೆ
  • ಮಹಿಳಾ ವಿವಿಗಳ ಮಧ್ಯೆ ಶೈಕ್ಷಣಿಕ ಸೇತುವೆಯ ಒಪ್ಪಂದ
    In (ರಾಜ್ಯ ) ಜಿಲ್ಲೆ
  • ಮಾನ್ಯ ಮುಖ್ಯಮಂತ್ರಿಗಳಿಗೆ ಡಾ.ಪಟ್ಟಣ ಬಹಿರಂಗ ಪತ್ರ
    In (ರಾಜ್ಯ ) ಜಿಲ್ಲೆ
  • ‘ಬ್ರೇಕ್ ಫ್ರೀ ಇಂಡಿಯಾ’ ಸ್ಕ್ಯಾನ್ ಮಾಡಿ ಆರೋಗ್ಯ ಸ್ಥಿತಿ ತಿಳಿಯಿರಿ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರ 400 ಅರ್ಜಿಗಳಿಗೆ ವಾರ್ತಾ ಇಲಾಖೆ ಅಸ್ತು
    In (ರಾಜ್ಯ ) ಜಿಲ್ಲೆ
  • ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ಗುರಿ :ಕಟಕದೋಂಡ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆಗಳ ಉಳಿವಿಗೆ ಯುವಜನತೆ ಮುಂದಾಗಲಿ :ಕಂಬಾಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.