Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!

ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ

ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸಿ :ಕೀರ್ತಿ
(ರಾಜ್ಯ ) ಜಿಲ್ಲೆ

೫ ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸಿ :ಕೀರ್ತಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಮುದ್ದೇಬಿಹಾಳ: ತಾಲ್ಲೂಕಿನಾದ್ಯಂತ ಜೂನ್ ೨೮ರಿಂದ ಜುಲೈ ೧ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಕಡ್ಡಾಯವಾಗಿ ಎರಡು ಹನಿ ಲಸಿಕೆ ಹಾಕಿಸಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ ಮನವಿ ಮಾಡಿದರು.
ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂನ್ ೨೮ರಂದು ಪ್ರತೀ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು. ನಂತರ ಮೂರು ದಿನಗಳ ಕಾಲ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಮಕ್ಕಳಿಗೆ ಪೋಲಿಯೊ ಹನಿ ಹಾಕಲಿದ್ದಾರೆ. ಪೋಲಿಯೊ ಮಾರಕ ಕಾಯಿಲೆಯಾಗಿದ್ದು, ಕೇವಲ ಎರಡು ಹನಿ ಲಸಿಕೆಯಿಂದ ಮಕ್ಕಳನ್ನು ಜೀವಮಾನದ ಅಂಗವೈಕಲ್ಯದಿಂದ ರಕ್ಷಿಸಬಹುದು. ಹೀಗಾಗಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಎಲ್ಲರೂ ಸಹಕರಿಸಬೇಕು ಎಂದು ಕರೆ ನೀಡಿದರು.
ಲಸಿಕಾ ಅಭಿಯಾನಕ್ಕೆ ಮುನ್ನ ಎಲ್ಲ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಗ್ರಾಮಗಳಲ್ಲಿ ಕರಪತ್ರ ಹಂಚಿಕೆ, ಡಂಗೂರ ಸಾರುವಿಕೆ ಹಾಗೂ ಶಾಲಾ ಮಕ್ಕಳ ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರು ಅಭಿಯಾನದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ಸತೀಶ್ ತಿವಾರಿ ಮಾತನಾಡಿ, ತಾಲ್ಲೂಕಿನಲ್ಲಿ ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಒಟ್ಟು ೩೯,೩೯೨ ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ೨೦೭ ಲಸಿಕಾ ಬೂತ್‌ಗಳನ್ನು ಸ್ಥಾಪಿಸಲಾಗಿದ್ದು, ೬ ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ೪೧೪ ಸಿಬ್ಬಂದಿ ಹಾಗೂ ೪೦ ಮೇಲ್ವಿಚಾರಕರು ಅಭಿಯಾನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಯಾವ ಮಗುವನ್ನೂ ಪೊಲಿಯೋ ವಂಚಿತರನ್ನಾಗಿಸಬೇಡಿ ಎಂದರು.
ಸಭೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಒ ಶಿವಲೀಲಾ ಸರಗಣಾಚಾರಿ, ಪಶು ಇಲಾಖೆಯ ಸಹಾಯಕ ನಿರ್ದೇಶಕ ಶಿವಾನಂದ ಮೇಟಿ, ಪುರಸಭೆಯ ಜಾವಿದ್ ನಾಯ್ಕೋಡಿ, ಆರೋಗ್ಯ ಇಲಾಖೆಯ ಅನುಸೂಯಾ ತೇರದಾಳ, ಎಂ.ಎಸ್. ಗೌಡರ, ಎಸ್.ಸಿ.ರುದ್ರವಾಡಿ, ಪ್ರಶಾಂತ್ ಕಡಿ, ಬಸವರಾಜ ಗೋಲಭಾವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!

ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ

ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು

ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
  • ಜೂ.25 ರಂದು ವಿವಿಧ ಕಾಮಗಾರಿಗಳ ಭೂಮಿ ಪೂಜೆ :ಸುಂಬಡ
    In (ರಾಜ್ಯ ) ಜಿಲ್ಲೆ
  • ಬಸವಾದಿ ಶರಣರಂತೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು
    In (ರಾಜ್ಯ ) ಜಿಲ್ಲೆ
  • ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯಗಳ ಸೇವನೆ & ಸಂಗ್ರಹಣೆ ಕಾನೂನುಬಾಹಿರ :ಪಿಎಸೈ
    In (ರಾಜ್ಯ ) ಜಿಲ್ಲೆ
  • ಅನೀಮಿಯಾ ಮುಕ್ತ ಭಾರತಕ್ಕೆ ಕೈಜೋಡಿಸಿದ ಐ.ಆರ್.ಡಿ. & ಸ್ಪಂದನ ಸಂಸ್ಥೆ
    In (ರಾಜ್ಯ ) ಜಿಲ್ಲೆ
  • ಜನ -ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಕ್ಕಳು ಮಾದಕ ವ್ಯಸನದಿಂದ ದೂರ ಇರಬೇಕು :ಘಾಟಗೆ
    In (ರಾಜ್ಯ ) ಜಿಲ್ಲೆ
  • ಯೋಗವು ಭಾರತವು ಜಗತ್ತಿಗೆ ನೀಡಿದ ಕೊಡುಗೆ :ಶ್ರೀಶೈಲಗೌಡ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.