Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನ -ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ
(ರಾಜ್ಯ ) ಜಿಲ್ಲೆ

ಜನ -ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಪಂನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ | ಸಚಿವ ಡಾ.ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಕಟ್ಟಪ್ಪಣೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜುಲೈ ೨ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆ ಸೇರಿದಂತೆ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಆಯಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ವಿದ್ಯುತ್ ಪರಿವರ್ತಕಗಳ ಸಮಸ್ಯೆಯಿದ್ದಲ್ಲಿ ಸ್ಪೀಡ್ ಅಪ್ ಮಾಡಿ ಕುಡಿಯುವ ನೀರಿಗೆ ತಕ್ಷಣಕ್ಕೆ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಖಾಸಗಿ ಬೋರ್ ವೆಲ್ ಗುರುತಿಸಿ: ಎಲ್ಲೆಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಬಹುದೋ,ಮುಂಚಿತವಾಗಿ ಮಾಹಿತಿ ಪಡೆದುಕೊಂಡು ಅಂತಹ ಸ್ಥಳದಲ್ಲಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಅದಕ್ಕೆಂದೇ ಖಾಸಗಿ ಬೋರವೆಲ್ ಗಳನ್ನು ಗುರುತಿಸಿ, ಅತಿ ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು ಎಂದರಲ್ಲದೆ, ಮಳೆ ಬರುವವರೆಗೆ ಮುಂಚಿತವಾಗಿ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡ ಪಾಟೀಲ,ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಣಿ ಕೆಬಿ ಹಾಗೂ ಬಳಗಾನೂರ ಕೆರೆ ತುಂಬಿವೆ

ವಿಜಯಪುರ ನಗರದಲ್ಲಿ ಭೂತನಾಳ ಕೆರೆಯಿಂದ ಐದು ವಾರ್ಡಗೆ ನೀರಿನ ತಾಪತ್ರಯವಿಲ್ಲ. ತಾಜಬಾವಡಿ ಪುನಶ್ಚೇತನಗೊಳಿಸಿದ್ದು ನೀರಿನ ಸದ್ಭಳಕೆಯಾಗಬೇಕು. ತಾಜಬಾವಡಿಗೆ ಯುಜಿಡಿ ನೀರು ಸೇರ್ಪಡೆಯಾಗದಂತೆ ಯೋಜನೆ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಸಚಿವರಿಗೆ ವಿವರಣೆ ನೀಡಿದರು

ನಿರ್ಲಕ್ಷ್ಯ ವಹಿಸಿದರೆ ಕ್ರಮ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಸಮನ್ವಯತೆಯಿಂದ ಗಂಭೀರವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು. ಇನ್ನೊಂದೆಡೆ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಮೊಬೈಲ್ ಆನ್ ಇಟ್ಟುಕೊಂಡೇ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಮಳೆಯಾಗಿ ಒಳಹರಿವು ಹೆಚ್ಚಳವಾಗುವವರೆಗೆ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕುಡಿಯುವ ಉದ್ಧೇಶಕ್ಕಾಗಿ ನೀರನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ ಸಚಿವರು ಕುಡಿಯುವ ನೀರಿಗೆ ಆದ್ಯತೆಯಾಗಿಸಿಕೊಂಡು ಅತಿ ಜಾಗೃತೆಯಿಂದ ಕಾರ್ಯ ನಿರ್ವಹಿಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ಅಭಾವ, ಸಮಸ್ಯೆ ಎದುರಿಸಲು ಸಜ್ಜಾಗಿ

ಜಿಲ್ಲೆಯಲ್ಲಿ ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಮುಂದೆ ಉಲ್ಬಣಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಜಾನುವಾರುಗಳಿಗೆ ಕುಡಿಯುವ ನೀರು, ಬಿತ್ತನೆ ಬೀಜ, ರಸಗೊಬ್ಬರ ಮೇವು ಎಲ್ಲ ವಿಚಾರ ಬಗ್ಗೆ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದ್ದು, ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾಗಿ ಸಚಿವರು ತಿಳಿಸಿದರು.
ಜುಲೈ ಎರಡನೇ ವಾರ ಮಳೆ ಬರಬಹುದೆಂದು ಹವಾಮಾನ ಇಲಾಖೆ ಹೇಳಿದೆ. ಕುಡಿಯುವ ನೀರಿನ ಸಮಸ್ಯೆಯಾದ ಸಂದರ್ಭದಲ್ಲಿ ಆದಾಗ್ಯೂ ಬೋರ್ ವೆಲ್ ಕೊರೆಯಿಸಿ, ವಿದ್ಯುತ್ ಅಳವಡಿಸಿ ನೀರು ಪೂರೈಸಲು ಸಮಯ ಬೇಕಾಗುತ್ತದೆ. ಆದರೆ, ಖಾಸಗಿ ಬೋರ್ ವೆಲ್ ಗಳನ್ನು ಗುರುತಿಸಿಕೊಟ್ಟುಕೊಳ್ಳಲು ಸೂಚಿಸಿದ್ದಾಗಿ ಸಚಿವರು ತಿಳಿಸಿದರು.
ತಾಜ್ ಬಾವಡಿ ನೀರನ್ನು ಅನ್ಯ ಉದ್ಧೇಶಕ್ಕೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಅನಿವಾರ್ಯ ಸಂದರ್ಭದಲ್ಲಿ ಖಾಸಗಿ ಬೋರವೆಲ್ ಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದೂ ಸೂಚಿಸಿದ್ದಾಗಿ ಸಚಿವರು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.