Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ
(ರಾಜ್ಯ ) ಜಿಲ್ಲೆ

ಗ್ರಾಮೀಣರು ಜಾನಪದ ಸಾಹಿತ್ಯದ ವಾರಸುದಾರರು :ಆಲಮೇಲ ಶ್ರೀ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಜಾನಪದ ಸಾಹಿತ್ಯದ ಮಾಲಿಕರು ಗ್ರಾಮೀಣರು. ಸಮುದಾಯ ಅಂಕು ಡೊಂಕುಗಳನ್ನು ತಿದ್ದುವ ಸಾಮರ್ಥ್ಯ ಜಾನಪದ ಸಾಹಿತ್ಯಕ್ಕೆ ಇದೆ. ಸರಳ ಭಾಷೆಯಿಂದ ಜನಪದ ಸಾಹಿತ್ಯ ಕೂಡಿದೆ ಎಂದು ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮಿಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಲಿಂ.ಸಿದ್ದಲಿಂಗ ಸ್ವಾಮೀಜಿಯವರ 92 ನೇ ಜಾತ್ರಾಮಹೋತ್ಸವದಂಗವಾಗಿ ವಚನ ಶಿಲಾಶಾಸನ ಮಂಟಪ ಆವರಣದಲ್ಲಿ ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾನಪದ ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮೆಲ್ಲರ ಹಿರಿಯರು ಜಾನಪದ ಸಂಸ್ಕೃತಿಯ ಮೌಲ್ಯಗಳನ್ನು ಪ್ರತಿಪಾದಿಸಿ ಅದರಂತೆ ನಡೆದು ಸುಂದರ ಸೌಹಾರ್ದತೆಯ ಮೂಲಕ ಜೀವನ ಕಟ್ಟಿಕೊಂಡು ಮಾದರಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಜಾನಪದ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಮಾತನಾಡಿ. ಗ್ರಾಮೀಣರು ಜಾನಪದ ಸಾಹಿತ್ಯ ಬೆಳೆಸಿ ಉಳಿಸಿದವರು. ಮೌಖಿಕ ಪರಂಪರೆಯಿಂದ ಬೆಳೆದುಬಂದ ಜನಸಾಮಾನ್ಯರ ಸಾಹಿತ್ಯವಾಗಿದೆ. ಜನಪದ ಗೀತೆಗಳು. ಕಥೆಗಳು. ಗಾದೆಗಳು. ಒಗಟುಗಳು ಪ್ರಖ್ಯಾತಗೊಂಡಿವೆ. ರಾಜ್ಯದಲ್ಲಿ ಜಾನಪದ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದು ಜನಪದರ ಆಸ್ತಿ ಎಂದರು.
ಸಾಹಿತಿ ಹಾಗೂ ಶಿಕ್ಷಕ ಅಶೋಕ ಹಂಚಲಿ ಅವರು ಜಾನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಕುರಿತು ಮಾತನಾಡಿ, ಜಾನಪದ ಸಾಹಿತ್ಯ ಸಮಾಜದ ಜೀವನಾಡಿ. ಜಾನಪದ ಹಾಡು ಮತ್ತು ಕಥೆಗಳು ಸಾಂಸ್ಕೃತಿಕ ಪರಂಪರೆಯ ಹಾಗೂ ನೈತಿಕ ಮೌಲ್ಯಗಳು ಹಾಗೂ ಬದುಕಿನ ಅನುಭವಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮಾಧ್ಯಮವಾಗಿದೆ. ಅನೇಕ ಜಾನಪದ ಹಾಡುಗಳನ್ನು ಹಾಡಿ ರೈತರ ಪ್ರಾಮಾಣಿಕ ಜೀವನದ ಮೇಲೆ ಬೆಳಕನ್ನು ಚೆಲ್ಲಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಸವರಾಜ ಹಾರಿವಾಳ, ಜಾನಪದ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷ ದೇವೇಂದ್ರ ಗೋನಾಳ, ಜಾನಪದ ಚಿಂತಕ ಬಸವರಾಜ ಸಾರವಾಡ ಜಾನಪದ ಹಾಡುಗಳನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಬಾಬುರಾವ ಮಹಾರಾಜರು, ನಿಂಗಪ್ಪ ಬೊಮ್ಮನಹಳ್ಳಿ, ಈರಣ್ಣ ಬೆಕಿನಾಳ, ಸಿ,ಬಿ.ಬಿರಾದಾರ, ವಿವೇಕಾನಂದ ಕಲ್ಯಾಣಶೆಟ್ಟಿ, ಎಲ್.ಎಲ್.ಓಂಕಾರ, ಕಾಶೀನಾಥ ಅವಟಿ, ವಿಜಯಲಕ್ಷ್ಮೀ ಹಳಕಟ್ಟಿ ಇತರರು ಇದ್ದರು.
ಇದೇ ಸಂದರ್ಭದಲ್ಲಿ ಹೆಬ್ಬಾಳ ಗ್ರಾಮದ ರೈತರ ಹಂತಿ ಪದ ಹಾಡಿ ರಂಜಿಸಿದರು. ಶಶಿಕಲಾ ನಾಯ್ಕೋಡಿ ಜಾನಪದ ಗೀತಗಾಯನ ಮಾಡಿದರು. ರೇಖಾ ಕುಂಬಾರ ಪ್ರಾಥಿ೯ಸಿದರು. ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಸಾಪ ತಾಲೂಕ ಅಧ್ಯಕ್ಷ ಶಿವಾನಂದ ಡೋಣೂರ ಸ್ವಾಗತಿಸಿದರು. ಮಮತಾ ಮುಳಸಾವಳಗಿ ನಿರೂಪಿಸಿದರು. ರೂಪಾ ರಜಪೂತ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.