Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ
(ರಾಜ್ಯ ) ಜಿಲ್ಲೆ

ಉತ್ತಮ ಮಳೆಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಗಂಗಾ ಪೂಜೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಉತ್ತಮ ಮಳೆ, ಕೃಷಿ ಸಮೃದ್ಧಿ ಹಾಗೂ ಜನಜೀವನದ ಒಳಿತಿಗಾಗಿ ತಾಲೂಕಿನ ಮಟ್ಟಿಹಾಳ ಗ್ರಾಮಸ್ಥರು ಮಂಗಳವಾರ ಪಟ್ಟಣದ ಹತ್ತಿರದ ಕೃಷ್ಣಾ ನದಿ ತೀರದಲ್ಲಿ ಸಂಪ್ರದಾಯಬದ್ಧವಾಗಿ ಗಂಗಾ ಪೂಜೆ ಮತ್ತು ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಹಿಂದೂ ಸಂಪ್ರದಾಯದಲ್ಲಿ ಗಂಗಾಮಾತೆಯ ಆರಾಧನೆಗೆ ವಿಶೇಷ ಮಹತ್ವವಿದ್ದು, ಜಲಾಭಿಷೇಕದ ಮೂಲಕ ವರುಣ ದೇವರನ್ನು ಪ್ರಾರ್ಥಿಸುವ ಪದ್ಧತಿ ಅನಾದಿ ಕಾಲದಿಂದಲೂ ನಡೆದುಬಂದಿದೆ. ಗಂಗಾಜಲವು ಶಿವನಿಗೆ ಅತ್ಯಂತ ಪ್ರಿಯವಾದುದು ಎಂಬ ನಂಬಿಕೆಯಿಂದ ಗ್ರಾಮಸ್ಥರು ಭಕ್ತಿಭಾವದಿಂದ ಪೂಜೆ ಸಲ್ಲಿಸಿದರು.
ಮುಂಗಾರು ಆರಂಭವಾದರೂ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ರೈತರಲ್ಲಿ ಆತಂಕ ಹೆಚ್ಚಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಕೊರತೆ ತೀವ್ರಗೊಂಡಿದ್ದು, ಕೆರೆ-ಕಟ್ಟೆಗಳು ಬತ್ತುತ್ತಿರುವ ಪರಿಸ್ಥಿತಿಯಲ್ಲಿ ಉತ್ತಮ ಮಳೆಯಾಗಲೆಂದು ವಿಶೇಷ ಪ್ರಾರ್ಥನೆ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ನೂರಾರು ಮುತ್ತೈದೆಯರು ಕುಂಭದೊಂದಿಗೆ ಕೃಷ್ಣಾ ನದಿ ದಡಕ್ಕೆ ತೆರಳಿ ಗಂಗಾಮಾತೆಗೆ ಅಭಿಷೇಕ ನೆರವೇರಿಸಿದರು. ಅರಿಶಿನ, ಕುಂಕುಮ, ಹೂವು ಹಾಗೂ ನೈವೇದ್ಯವನ್ನು ಅರ್ಪಿಸಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಸಮೃದ್ಧಿ ನೆಲೆಸಲೆಂದು ಸಂಕಲ್ಪ ಮಾಡಿದರು.
ಪೂಜೆ ಬಳಿಕ ಗ್ರಾಮಸ್ಥರು ಹಾಗೂ ಮಹಿಳೆಯರು ಕೊಲ್ಹಾರದ ಕೃಷ್ಣಾ ನದಿ ದಡದಿಂದ ಹತ್ತಾರು ಕಿಲೋಮೀಟರ್‌ಗಳ ಪಾದಯಾತ್ರೆ ಮೂಲಕ ಮಟ್ಟಿಹಾಳ ಗ್ರಾಮಕ್ಕೆ ತೆರಳಿ ಗ್ರಾಮದ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಿದ್ದು ಬಿರಾದಾರ, ಈರಪ್ಪ ಬಿರಾದಾರ, ಯಮನಪ್ಪ ಬಿರಾದಾರ, ಪರಸು ಗೋಳಗೊಂಡ, ಸಗಪ್ಪ ಅಂಗಡಗೇರಿ, ಸಿದ್ದು ರಾ. ಬಿರಾದಾರ, ಈರಣ್ಣ ಮನಗೂಳಿ, ಹಣಮಂತ ತೇಲಿ, ಪರಸು ಗು. ಗೋಳಗೊಂಡ, ಸಚಿನ್ ಬಿರಾದಾರ, ದುಂಡಪ್ಪ ಪೂಜಾರಿ, ಬೀರು ಪೂಜಾರಿ, ಸಂಗಪ್ಪ ಬಿರಾದಾರ, ಬಸು ಮಟ್ಟಿಹಾಳ ಹಾಗೂ ಹಣಮಂತ ಬಿರಾದಾರ ಸೇರಿದಂತೆ ಗ್ರಾಮಸ್ಥರು ಮತ್ತು ನೂರಾರು ಮಹಿಳೆಯರು ಭಾಗವಹಿಸಿದ್ದರು.

“ಬರ ಪರಿಸ್ಥಿತಿ ಎದುರಾದರೆ ಜನರು ಹಾಗೂ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗುತ್ತೆ. ಈ ಹಿನ್ನೆಲೆಯಲ್ಲಿ ಉತ್ತಮ ಮಳೆಯಾಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲೆಂದು ಭಗವಂತನಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ,”

– ಗೌಡಪ್ಪ ಬಿರಾದಾರ
ಮಟ್ಟಿಹಾಳ ಗ್ರಾಮದ ರೈತ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026

ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ

ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ

ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 25,2026
    In ದಿನಪತ್ರಿಕೆ
  • ಸರ್ಕಾರಿ ಅಕ್ಕಿ ಅಕ್ರಮ ಸಾಗಾಟ: ಯುವಕನ ಬಂಧನ
    In (ರಾಜ್ಯ ) ಜಿಲ್ಲೆ
  • ಪದವಿ ವಿದ್ಯಾರ್ಥಿಗಳಿಂದ ಕ್ಷೇತ್ರ ಅಧ್ಯಯನ ಕಾರ್ಯ
    In (ರಾಜ್ಯ ) ಜಿಲ್ಲೆ
  • ಪೌರ ಕಾರ್ಮಿಕರ ಶ್ರಮಕ್ಕೆ ಪತ್ರಕರ್ತರಿಂದ ಸಲಾಂ
    In (ರಾಜ್ಯ ) ಜಿಲ್ಲೆ
  • ಬಸವರಾಜ ಕುಂಬಾರ ನಿಧನಕ್ಕೆ ಸಚಿವ ಎಂ.ಬಿ.ಪಾಟೀಲ ಕಂಬನಿ
    In (ರಾಜ್ಯ ) ಜಿಲ್ಲೆ
  • ವಿಶೇಷಚೇತನ ಮಕ್ಕಳಿಗೆ ಉಚಿತ ನೇತ್ರ ತಪಾಸಣೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಸೆ.25 ರಿಂದ ಕಾಮಿಡಿ ಕಿಲಾಡಿಗಳು ಖ್ಯಾತಿ ರಾಘು ರಂಗಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ಬಂಕಲಗಿ ಪ್ರೌಢಶಾಲೆ ಕ್ರೀಡಾಪಟುಗಳಿಗೆ ಸಮವಸ್ತ್ರ ಕಾಣಿಕೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ನೆಸ್ಸೆಸ್ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಕರವಿನಾಳದಲ್ಲಿ ದಲಿತ ಸಮುದಾಯಕ್ಕೆ ಮೂಲಸೌಕರ್ಯ ವಂಚನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.