ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರ ಜಿಲ್ಲೆಯಲ್ಲಿ ನಾಳೆ ದಿ.25 ಮತ್ತು ದಿ.26 ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ.25 ಗುರುವಾರ ಬೆ.10 ರಿಂದ 12ಗಂ. ವರೆಗೆ ಬಿ.ಎಂ.ಪಾಟೀಲ ರಸ್ತೆ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಸಂ.4ಗಂ. ಸಿಂದಗಿ ವಿಧಾನಸಭಾ ಕ್ಷೇತ್ರದ ಆಲಮೇಲ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ ಹಾಗೂ ಉದ್ಘಾಟಣೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ದಿ.26 ಶುಕ್ರವಾರ ಬೆ.9ಗಂ., ಐಶ್ವರ್ಯನಗರ ರಾಣಿಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ ಗಳ ತರಬೇತಿ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

