ಬಾಸ್ಕೇಟ್ ಬಾಲ್ ಕ್ರೀಡಾಕೂಟ:
ಬಂಜಾರಾ ಪ್ರೌಢ ಶಾಲೆ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ವಿಜಯಪುರ: ವಿದ್ಯಾರ್ಥಿಗಳು ತರಗತಿ ಚಟುವಟಿಕೆಗಳ ಜೊತೆಗೆ ಕ್ರೀಡೆಗಳಲ್ಲೂ ಉತ್ಸಾಹದಿಂದ ಪಾಲ್ಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕ್ರೀಡಾಭಿರುಚಿ ಅಗತ್ಯ ಎಂದು ವಿಜಯಪುರ ನಗರ ವಲಯ ದೈಹಿಕ ಶಿಕ್ಷಣಾಧಿಕಾರಿ ಎಸ್.ಎ.ಬಿರಾದಾರ ಹೇಳಿದರು.
ಬಿಜಾಪುರ ಜಿಲ್ಲಾ ಬಂಜಾರಾ ವಿದ್ಯಾವರ್ಧಕ ಸಂಘದ ಬಂಜಾರಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರು (ಆಡಳಿತ) ಕಾರ್ಯಾಲಯ ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೧೭ ವರ್ಷ ವಯೋಮಾನದೊಳಗಿನ ‘ಬೆಳಗಾವಿ ವಿಭಾಗ ಮಟ್ಟದ ‘ಬಾಸ್ಕೇಟ್ ಬಾಲ್’ ಕ್ರೀಡಾಕೂಟವನ್ನು ಬಂಜಾರಾ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ‘ಬಾಸ್ಕೇಟ್ ಬಾಲ್’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಟ್ರೋಪಿ ವಿತರಣೆ ಮಾಡಿ ಮಾತನಾಡಿದ ಅವರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವನೆ ಹೊಂದಿದಾಗ ಮಾತ್ರ ಜೀವನದಲ್ಲಿನ ಗುರಿ ತಲುಪಲು ಸಾಧ್ಯ. ಆ ನಿಟ್ಟಿನಲ್ಲಿ ಶಿಕ್ಷಕರು, ಪಾಲಕರು ಇನ್ನಷ್ಟು ಶ್ರಮಿಸಬೇಕಾಗಿದೆ ಎಂದು ಹೇಳಿದರು.
ಕ್ರೀಡೆಯಲ್ಲಿ ಸಾಧನೆ ಮಾಡಿ ಕೀರ್ತಿ ಹೆಚ್ಚಿಸಿದ ಕೀರ್ತಿ ಚವ್ಹಾಣ್, ಸಾಕ್ಷಿ ವಾಲಿಕಾರ, ಶಿವುಬಾಯಿ ಮಠ, ಶ್ವೇತಾ ಬಡಿಗೇರ, ಮಾಬುಬಿ ಮುಲ್ಲಾ ವಿದ್ಯಾರ್ಥಿಗಳಿಗೆ ಅಬಿನಂದಿಸಲಾಯಿತು.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಿ.ಎಲ್.ಚವ್ಹಾಣ್, ಕಾರ್ಯಾಧ್ಯಕ್ಷ ಕೆ.ಜಿ.ರಾಠೋಡ, ಕಾರ್ಯದರ್ಶಿಗಳಾದ ಆರ್.ಡಿ.ಚವ್ಹಾಣ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸಂದೀಪ ರಾಠೋಡ, ಪ್ರಾಥಮಿಕ ಶಾಲೆಯ ಮುಖ್ಯ ಗುರು ಎಂ.ಬಿ.ಪೂಜಾರಿ, ಶಿಕ್ಷಕರಾದ ಎಸ್.ವ್ಹಿ.ದೇಶಪಾಂಡೆ, ಎ.ಎಂ.ನಾಗೊಂಡ, ಜೆ.ಕೆ.ರಾಠೋಡ, ಎಸ್.ಬಿ.ಒಡೆಯರ, ಎಸ್.ಡಿ.ಚವ್ಹಾಣ್, ಆರ್.ಎಸ್.ಹಿರೇಮಠ, ಅಶೋಕ ಚವ್ಹಾಣ್, ಆರ್.ಎನ್.ಬಕಾಟೆ, ರೇಖಾ ರಜಪೂತ, ಎಸ್.ಪಿ.ದಢೇಕರ ಹಾಗೂ ಸಿಬ್ಬಂದಿ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ.