ಹೊನವಾಡ: ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದಲ್ಲಿ ನಮ್ಮೂರಿಗಾಗಿ ನಾವು ಯುವಸೇನಾ ಹಾಗೂ ಯುವ ಬಳಗದಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಸ್ವಚ್ಛತೆ ಕೇವಲ ಗ್ರಾಮ ಪಂಚಾಯತಿಯ ಕೆಲಸವಲ್ಲ. ಅದರಲ್ಲಿ, ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ. ಸ್ವಚ್ಛತಾ ಕಾರ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಿದಾಗ ಮಾತ್ರ ಆರೋಗ್ಯ ಹಾಗೂ ಸುಂದರವಾದ ಸಮಾಜ ನಿರ್ಮಾಣ ಸಾಧ್ಯ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ತುಕಾರಾಮ ದಡಕೆ ತಿಳಿಸಿದರು.
ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛತಾ ಕಾರ್ಯಕ್ರಮ ಒಂದು ಅವಧಿಗೆ ಸೀಮಿತವಾಗಿರದೇ ನಿರಂತರ ಅಭಿಯಾನವಾದಾಗ ಸ್ವಚ್ಛ ಗ್ರಾಮವಾಗಲು ಸಾಧ್ಯ ಎಂದರು.
ಪರಿಸರ ಸ್ವಚ್ಛತೆಯಿಂದ ಮನುಷ್ಯನ ಆರೋಗ್ಯ ಉತ್ತಮವಾಗುತ್ತದೆ. ಹಾಗಾಗಿ, ಎಲ್ಲರೂ ತಮ್ಮ ಸುತ್ತಲಿನ ಪರಿಸರದ ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಬೇಕು ಎಂದು ಗ್ರಾಮ ಪಂಚಾಯತಿ ಪಿಡಿಓ ಸುರೇಶ ಕಳ್ಳಿಮನಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿರಿಯರಾದ ಮುರಗೇಪ್ಪಾ ಕೋಟಿ, ಮಹಾದೇವ ಜಾಧವ, ಶಂಕರ ಕಟೆ, ಚಿದಾನಂದ ಅರಮೋತಿ, ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಅಣ್ಣಪ್ಪ ಬಿದರಿ, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಮತ್ತು ಯುವಸೇನಾ ಪ್ರತಿನಿಧಿಗಳು ಹಾಗೂ ಗ್ರಾಮದ ಜನರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

