ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕನ್ನಡ ಸಾಹಿತ್ಯ ಗೆಳೆಯರ ಬಳಗ ವತಿಯಿಂದ ೨೦೨೫–೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ.೮೫ ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಇತ್ತೀಚಿನಿ ಫೋಟೋದೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಸಿಂದಗಿಯ ಅಂಬೇಡ್ಕರ್ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಾರ್ವಜನಿಕ ಗ್ರಂಥಾಲಯ, ಅಥವಾ ಜ್ಯೋತಿ ನಗರದಲ್ಲಿರುವ ಲಿಟಲ್ ವಿಂಗ್ಸ್ ಪ್ರಿ ಸ್ಕೂಲ್‌ಯನ್ನು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಜುಲೈ ೫ ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: ೮೨೭೭೧೮೬೭೫೭ಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಗೆಳೆಯರ ಬಳಗದ ಅಧ್ಯಕ್ಷ ರಾಜಶೇಖರ ಕೂಚಬಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

