ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಪ್ರತಿಷ್ಠಿತ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಪ್ರಧಾನಕಾರ್ಯದರ್ಶಿ ಎ ಎಸ್ ಪಾಟೀಲ ಅವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ನೇಮಕವಾದ ನಿಮಿತ್ಯ ಅಮ್ಮ ಫೌಂಡೇಶನ್ ವತಿಯಿಂದ ಶೈಕ್ಷಣಿಕ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಂಜಿಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಖ್ಯಾತ ನ್ಯಾಯವಾದಿ ಎ ಎಂ ತಾಂಬೋಳಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸಾಧನೆಯ ಮೂಲಕ ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಎ ಎಸ್ ಪಾಟೀಲ ಅವರು ಸಿಂಡಿಕೇಟ್ ಸದಸ್ಯರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ. ಅತ್ಯಂತ ಸಂಕಷ್ಟದ ದಿನಗಳಲ್ಲಿ ಡಾ. ಎಸ್ ಎ ಪುಣೇಕರ ಅವರೊಂದಿಗೆ ಸೇರಿದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವುದರ ಮೂಲಕ ಉತ್ತಮ ಕಾರ್ಯ ಮಾಡಿದ್ದಾರೆ. ಅದರಲ್ಲೂ ಹೆಣ್ಣುಮಕ್ಕಳ ಶಿಕ್ಷಣ ಸಲುವಾಗಿ ಪ್ರತ್ಯೇಕ ಮಹಿಳಾ ಕಾಲೇಜುಗಳನ್ನು ತೆರೆದು ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಠ ಸೇವೆ ತೋರಿದ್ದಾರೆ. ಇವರ ಸೇವೆ ಸಂದ ಫಲವಾಗಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಸಿಂಡೀಕೇಟ್ ಸದಸ್ಯ ಎ ಎಸ್ ಪಾಟೀಲ ಮಾತನಾಡಿ, ಸುಮಾರು ೫೦ ವರ್ಷಗಳ ಹಿಂದೆ ಡಾ. ಎ ಎಸ್ ಪುಣೇಕರ್ ಅವರು ಸಿಕ್ಯಾಬ್ ಶಿಕ್ಷಣ ಸಂಸ್ಥೆ ಹುಟ್ಟು ಹಾಕಿ ಬಡ ಮದ್ಯಮ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದ್ದಾರೆ. ಅವರ ಗರಡಿಯಲ್ಲಿಯೇ ಕೆಲಸ ನಿರ್ವಹಿಸಿದ ಸಂತೃಪ್ತಿ ನನಗಿದೆ. ನನ್ನ ಶೈಕ್ಷಣಿಕ ಸೇವೆಗೆ ಸಿಂಡಿಕೇಟ್ ಸದಸ್ಯ ಸ್ಥಾನಕ್ಕೆ ನೇಮಕ ಮಾಡಿರುವುದು ಸಂತಸ ತಂದಿದೆ. ಹುದ್ದೆಗೆ ತಕ್ಕಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದರು.
ಸನ್ಮಾನ ಕಾರ್ಯಕ್ರಮದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಬಿ ಎನ್ ವಡಗೇರಿ, ಅಮ್ಮ ಫೌಂಡೇಶನ್ ಗೌರವಾಧ್ಯಕ್ಷ ಯು ಐ ಶೇಖ, ಶಿಕ್ಷಕರ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕಬೂಲ್ ಕೊಕಟನೂರ, ಕಲಕೇರಿಯ ನಬಿಲಾಲ ಬಡೆಮ್ಮಗೋಳ ಸೇರಿದಂತೆ ಮತ್ತೀತರರಿದ್ದರು.

