ಉದಯರಶ್ಮಿ ದಿನಪತ್ರಿಕೆ
ವಿಜಯಪುರ:೨೦೨೬-೨೭ನೇ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಕ್ರಿಶ್ಚಿಯನ್ ಜನಾಂಗಕ್ಕೆ ಸೇರಿದ ಸಿಇಟಿ, ನೀಟ್ ಹಾಗೂ ಜೆಇಇ ಮೂಲಕ ಆಯ್ಕೆಯಾದ ಎಂಬಿಬಿಎಸ್, ಎಂಡಿ, ಎಂ.ಎಸ್ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ, ಕಾಲೇಜು, ಖಾಸಗಿ, ಮ್ಯಾನೇಜ್‌ಮೆಂಟ್ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ೫ ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ವೃತ್ತಿಪರ ಕೋರ್ಸಗಳಾದ ಎಂ.ಟಿ.ಟಿ.ಎಸ್. ಎಂ.ಡಿ. ಬಿ.ಡಿ.ಎಸ್. ಟಿ.ಆಯುಷ್, ಎಂ.ಆಯುಷ್. ಬಿ.ಇ. ಬಿ.ಟೆಕ್. ಅಗ್ರಿಕಲ್ಟರ್ ಇಂಜಿನೀಯರಿಂಗ್, ಡೈರಿ ಟೆಕ್ನಾಲಜಿ, ಫೋರೆಸ್ಟ್ರಿ, ವೆಟೆರ್‌ನರಿ ಹಾಗೂ ಅನಿಮಲ್ ಸೈನ್ಸಿಸ್, ಫುಡ್ ಟೆಕ್ನಾಲಜಿ, ಬೈಯೋಟಕ್ನಾಲಜಿ, ಫಿಶರೀಸ್, ಸೆರಿಕಲ್ಟರ್, ಹೋಂ/ ಕಮ್ಯುನಿಟಿ ಸೈನ್ಸಿಸ್. ಫುಡ್ ನ್ಯೂಟ್ರಿಷನ್ & ಡೈಯಾಟೆಟಿಕ್ಸ್, ಬಿ.ಫಾರ್ಮಾ, ಎಂ.ಫಾರ್ಮಾ, ಫಾರ್ಮಾ.ಡಿ, ಡಿ.ಫಾರ್ಮಾ ಈ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರಿವು ವಿದ್ಯಾಭ್ಯಾಸ ಸಾಲಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ. ದೂರವಾಣಿ ಸಂಖ್ಯೆ: ೦೮೩೫೨ ೨೭೮೩೪೪ ಸಂಪರ್ಕಿಸಬಹುದಾಗಿದೆ ಎಂದು ಕೆಸಿಸಿಡಿಸಿ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
