ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ೨೦೨೬-೨೭ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ (ಪಿಎಂಆರ್ ಬಿಪಿ) ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳನ್ನು ಮೆರೆದ ಮಕ್ಕಳಿಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ನವದೆಹಲಿಯಲ್ಲಿ ನಡೆಯುವ ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಿದ್ದಾರೆ.
೧೮ ವರ್ಷದೊಳಗಿನ ಅರ್ಹ ಮಕ್ಕಳು ಶೌರ್ಯ, ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕಲೆ ಮತ್ತು ಸಂಸ್ಕೃತಿ ಹಾಗೂ ನಾವೀನ್ಯತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಸ್ವಯಂ ನಾಮನಿರ್ದೇಶನ ಹಾಗೂ ಇತರರಿಂದ ನಾಮನಿರ್ದೇಶನ ಸಲ್ಲಿಸಲು ಅವಕಾಶವಿದೆ. ಆಸಕ್ತರು ರಾಷ್ಟ್ರೀಯ ಪ್ರಶಸ್ತಿhttps://awards.gov.in ಪೋರ್ಟಲ್ ಮೂಲಕ ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ.೩೧ ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೂರವಾಣಿ ಸಂಖ್ಯೆ ೦೮೩೫೨-೨೯೫೩೫೩ ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
