ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಜಲನಗರದಲ್ಲಿರುವ ಬಿ. ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನ ಆಚರಿಸಲಾಯಿತು.
ಮಂಗಳವಾರ ನಡೆದ ಕಾರ್ಯಕ್ರಮಕ್ಕೆ ಶಾಲೆಯ ಪ್ರಾಚಾರ್ಯ ವಿಕ್ರಂ ನಾರ್ವೆೇಕರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರ ಯಶಸ್ಸಿನ ಹಿಂದೆ ತಾಯಿ ಆಶೀರ್ವಾದ, ಪ್ರೋತ್ಸಾಹ, ಪರಿಶ್ರಮ, ತ್ಯಾಗ ಅಡಗಿರುತ್ತದೆ. ಆದ್ದರಿಂದ ಇಂಥ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ತಾಯಿಯನ್ನು ಗೌರವಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಾಯಂದಿರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳ ಮನೋರಂಜನೆ ಮತ್ತು ನಾಬಾ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಸಂಯೋಜಕಿ ಜಯಾ ಗಲಗಲಿ, ಬೋಧಕ, ಬೋಧಕರ ಹೊರತಾದ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

