Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಬಿ.‌ ಎಲ್. ಡಿ. ಇ‌ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ವತಿಯಿಂದ ಬುಧವಾರ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕುರಿತು ಕಾರ್ಯಕ್ರಮವನ್ನು ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಿಜಯಪುರ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಕೆ. ಮಾತನಾಡಿ, ಹಿರಿಯ ನಾಗರಿಕರ ಮೇಲಿನ ದೌರ್ಜನ್ಯಕ್ಕೆ ಒಳಗಾದವರಿಗೆ ಸರಕಾರದಿಂದ ಲಭ್ಯವಿರುವ ನಾನಾ ನೆರವು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕುಟುಂಬದಲ್ಲಿ ದೌರ್ಜನ್ಯವನ್ನು ತಡೆಗಟ್ಟಲು ಹೊಸ ತಲೆಮಾರಿನೊಂದಿಗೆ ಹೊಂದಾಣಿಕೆ ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.‌‌ ಮಕ್ಕಳ ಸಣ್ಣಪುಟ್ಟ ತಪ್ಪುಗಳನ್ನು ಕ್ಷಮಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕುಟುಂಬದಲ್ಲಿ ಸೌಹಾರ್ದಯುತ ವಾತಾವರಣ ನಿರ್ಮಿಸಬೇಕು ಮತ್ತು ಪರಸ್ಪರ ಸಹಕಾರದಿಂದ ಕುಟುಂಬವನ್ನು ಸದೃಢವಾಗಿರಿಸಬೇಕು ಎಂದು ಅವರು ಸಲಹೆ ನೀಡಿದರು.
ಬಿ.ಎಲ್.ಡಿ.ಇ ಡೀಮ್ಡ್ ವಿವಿ ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಮಾತನಾಡಿ, ಹಿರಿಯ ನಾಗರಿಕರ ಹಕ್ಕುಗಳು ಮತ್ತು ಅವರ ರಕ್ಷಣೆಗಾಗಿ ಜಾರಿಯಲ್ಲಿರುವ ನಾನಾ ಕಾನೂನುಗಳ ಕುರಿತು ಮಾಹಿತಿ ನೀಡಿದರು.
ಹಿರಿಯರು ತಮ್ಮ ಇಚ್ಛಾಪತ್ರ ವನ್ನು ಸೂಕ್ತವಾಗಿ ರಚಿಸಿ ಸುರಕ್ಷಿತವಾಗಿ ಇಡಬೇಕು. ಜೀವಿತಾವಧಿಯಲ್ಲಿಯೇ ತಮ್ಮ ಆಸ್ತಿಯನ್ನು ಮಕ್ಕಳ ಹೆಸರಿಗೆ ವರ್ಗಾಯಿಸದಿರುವುದು ಒಳಿತು ಎಂದು ಅವರುಸಲಹೆ ನೀಡಿದರು.
ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ ಬೆಂಟೂರ ಮಾತನಾಡಿ, ಹಿರಿಯ ನಾಗರಿಕರಿಗೆ ಆಸ್ಪತ್ರೆಯಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ವೈದ್ಯಕೀಯ ಮತ್ತು ಸಲಹಾ ಸೇವೆಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಮತ್ತು ವಿಭಾಗದ ಮುಖ್ಯಸ್ಥ ಡಾ. ಆನಂದ ಪಿ. ಅಂಬಲಿ ಮಾತನಾಡಿ, ಹಿರಿಯರ ಮೇಲಿನ ದೌರ್ಜನ್ಯವು ಅವರ ಮಾನಸಿಕ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ದೌರ್ಜನ್ಯಕ್ಕೆ ಒಳಗಾದ ಹಿರಿಯರಿಗೆ ವೃದ್ಧಾಪ್ಯದ ವೈದ್ಯಕೀಯ ವಿಭಾಗದಲ್ಲಿ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಆರೋಗ್ಯ ಸಲಹೆ ಮತ್ತು‌ ಅಗತ್ಯ ಮಾರ್ಗದರ್ಶನವನ್ನು ನಿರಂತರವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಗರಿಕರು, ದೌರ್ಜನ್ಯಕ್ಕೆ ಒಳಗಾಗುವ ಹಿರಿಯರಿಗೆ ನೆರವಾಗುವ ವಿಶೇಷ ಕೇಂದ್ರವನ್ನು ಸ್ಥಾಪಿಸಬೇಕು‌. ಹಿರಿಯರು ಹಾಗೂ ಮೊಮ್ಮಕ್ಕಳು ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು, ಮೊಮ್ಮಕ್ಕಳೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸಿಕೊಳ್ಳುವುದು, ಸೊಸೆಯೊಂದಿಗೆ ಹೊಂದಾಣಿಕೆಯಿಂದ ವರ್ತಿಸುವುದು ಹಾಗೂ ಮನೆಯ ದೈನಂದಿನ ಕಾರ್ಯಗಳಲ್ಲಿ ಕುಟುಂಬ ಸದಸ್ಯರಿಗೆ ಸಹಕರಿಸುವುದರಿಂದ ಕುಟುಂಬದಲ್ಲಿ ಸಂತೋಷ, ಸಾಮರಸ್ಯ ಮತ್ತು ಆರೋಗ್ಯಕರ ವಾತಾವರಣ ನಿರ್ಮಾಣವಾಗುತ್ತದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ಕುರಿತು ಆಯೋಜಿಸಿದ್ದ ಪೋಸ್ಟರ್ ಸ್ಪರ್ಧೆಯಲ್ಲಿ ವಿಜೇತರಾದ ಎಂ. ಕೆ. ಹಿರ್ಯಾಳ, ಅನುಪಮಾ ಸಿನ್ಹಾ, ಅಂಜಲಿ ವರ್ಮಾ ಹಾಗೂ ದಾನಮ್ಮ ಅರಳಿ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು, ವೈದ್ಯರು, ಬೋಧಕ ವರ್ಗದ ಸದಸ್ಯರು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026

ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ

ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ & ಜಾಗೃತಿ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಬಿ.ಎಂ.ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ವಿಶ್ವ ತಾಯಂದಿರ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 30, 2026
    In ದಿನಪತ್ರಿಕೆ
  • ಜೂ.೩೦ ರಿಂದ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ-ಮನೆ ಭೇಟಿ
    In (ರಾಜ್ಯ ) ಜಿಲ್ಲೆ
  • ತಂಬಾಕು ಮಾರಾಟ ಮಳಿಗೆಗಳ ಮೇಲೆ ದಾಳಿ
    In (ರಾಜ್ಯ ) ಜಿಲ್ಲೆ
  • ಅನಧಿಕೃತ ಕಟ್ಟಡ ತೆರವುಗೊಳಿಸಲು ಪುರಸಭೆಗೆ ಒತ್ತಾಯ
    In (ರಾಜ್ಯ ) ಜಿಲ್ಲೆ
  • ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವದ ಬಲವರ್ಧನೆಗೆ ಮತದಾನ ಹಕ್ಕು ಅಮೂಲ್ಯ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸಾಲಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಆರೋಗ್ಯಕ್ಕೆ ಪೋಲಿಯೋ ಹನಿ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.