ಎಂಎಲ್ಸಿ ಸುನೀಲಗೌಡ ಪಾಟೀಲ ನಿವಾಸಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯದಲ್ಲಿ ಸಮಗ್ರ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ತಮ್ಮ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ತಮ್ಮ ನಿವಾಸಕ್ಕೆ ಆಗಮಿಸಿದ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮತಗಟ್ಟೆ ಸಂಖ್ಯೆ 46ರ ಅಧಿಕಾರಿಗಳಾದ ಅಜೀತ ಬಿಜ್ಜೂರ ಹಾಗೂ ಫಯಾಜ್ ಮಂಡೆ ಅವರು ಶಾಸಕರಿಂದ ಮಾಹಿತಿ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಅಗತ್ಯವಾದ ಎಲ್ಲ ಮಾಹಿತಿಯನ್ನು ಒದಗಿಸಿದ ಶಾಸಕರು, ಪ್ರತಿಯೊಬ್ಬರು ಈ ಪ್ರಕ್ರಿಯಲ್ಲಿ ಪಾಲ್ಗೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ಕುಟುಂಬ ಸದಸ್ಯರ ಹೆಸರುಗಳು ಮುಂದುವರೆಯುವುದನ್ನು ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಿದರು.

