ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೬-೨೭ ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ.ಎ. ದೃಶ್ಯ ಕಲೆಯಲ್ಲಿ ನಾಲ್ಕು ವರ್ಷದ ಎಂಟು ಸೆಮ್ ಗಳ ‘ರಾಜ್ಯ ಶಿಕ್ಷಣ ಪದ್ಧತಿ’ ಯಂತೆ ಸ್ನಾತಕ ಪದವಿ ಪ್ರವೇಶಕ್ಕೆ ದ್ವಿತೀಯ ಪಿ.ಯು.ಸಿ. ಇಲ್ಲವೇ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೈಸೂರು ವಿಶ್ವವಿದ್ಯಾಲಯ ಆನ್ ಲೈನ್ ಅರ್ಜಿ ಆಹ್ವಾನಿಸಿದೆ.
https://uucms.karnataka.gov.in ಈ ವೆಬ್ ಸೈಟ್‌ನಲ್ಲಿ ಅಭ್ಯರ್ಥಿಗಳು ಜುಲೈ ೪ ರವರೆಗೆ (ದಂಡ ಶುಲ್ಕದೊಂದಿಗೆ) ಅರ್ಜಿ ಸಲ್ಲಿಸಬಹುದಾಗಿದೆ.
ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಷಯಗಳಲ್ಲಿ ವಿಶೇಷ ಅಧ್ಯಯನ ಮಾಡಬೇಕಾಗುತ್ತದೆ.
ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ಜುಲೈ ೬ ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೨೧-೨೪೩೮೯೩೧ ಸಂಪರ್ಕಿಸಬಹುದು ಎಂದು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜನ ಡೀನ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
