ಬೆಂಗಳೂರು: ಬಿಜೆಪಿಯಲ್ಲಿ ರಾಜ್ಯಾಕ್ಷರಾಗಿ ಬಹುತೇಕ ಶೋಭಾ ಕರಂದ್ಲಾಜೆ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದು, ಅವರು ಯಾರನ್ನೇ ಅಧ್ಯಕ್ಷರನ್ನಾಗಿ ಮಾಡಿದರೂ ಬಹಳ ಸಂತೋಷ ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಬೇರೆ ಪಕ್ಷದವರು ನಮ್ಮ ಪಕ್ಷದ ಬಗ್ಗೆ ಮಾತನಾಡಬಹುದು. ನಾನು ಮಾತನಾಡಲು ಹೋಗುವುದಿಲ್ಲ. ಅವರ ಪಕ್ಷಕ್ಕೆ ಬಿಟ್ಟ ವಿಚಾರ. ಪಕ್ಷದ ಅಧ್ಯಕ್ಷರ ಆಯ್ಕೆ ಪಕ್ಕಕ್ಕಿರಲಿ, ಆದರೆ ಐದು ತಿಂಗಳಾದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿಲ್ಲ ಎಂದು ಹೇಳಿದರು,
ಯಾರನ್ನೇ ಅಧ್ಯಕ್ಷರನ್ನಾಗಿ, ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಿ ಅವರಿಗೆ ಶುಭವಾಗಲಿ. ಅವರು ನಮ್ಮ ತಪ್ಪುಗಳನ್ನು ಕಂಡುಹಿಡಿಯಲಿ, ಜಾಗೃತಗೊಳಿಸಲಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನ ಎತ್ತಿಹಿಡಿಯಲಿ ಎಂದು ಶುಭ ಹಾರೈಸುತ್ತೇನೆ ಎಂದರು.
ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಮತಗಳನ್ನು ಸೆಳೆಯಲು ಶೋಭ ಕರಂದ್ಲಾಜೆ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ಉತ್ತರಿಸಿದರು.
ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ ಮಹಿಳೆಯರ ಮನಸ್ಸನ್ನು ಗೆದ್ದು ಅಧಿಕಾರಕ್ಕೆ ಬರಲು ಕಾರಣವಾಯಿತು. ಬಿಜೆಪಿ ಮಹಿಳಾ ಅಧ್ಯಕ್ಷರನ್ನು ಮಾಡುವುದು ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕುವ ಹುನ್ನಾರವೇ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನಗೆ ಉತ್ತರಿಸಿ, ತಪ್ಪೇನಿದೆ, ಮಾಡಲಿ ಬಿಡಿ, ನಮ್ಮ ಅಕ್ಕ ಅಧ್ಯಕ್ಷರಾದರೆ ಒಳ್ಳೆಯದಲ್ಲವೇ? ಹಿರಿಯ ನಾಯಕರು, ಕೆಜೆಪಿ ಕಟ್ಟಿದ್ದಾರೆ, ಬಿಜೆಪಿ ಬೆಳೆಸಿದ್ದಾರೆ, ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ, ಅವರದೇ ಅನುಭವವಿದೆ, ಅವರು ಆದರೆ ಸಂತೋಷ ಎಂದು ಹೇಳಿದರು.
Related Posts
Add A Comment