ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಹಿರಿಯ ಪತ್ರಕರ್ತ ಶರಣಬಸಪ್ಪ ಮಸಳಿ ಅವರನ್ನು ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಶರಣಬಸಪ್ಪ ಮಸಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ತಿಳಿಸಿದ್ದಾರೆ.
ಹಲವು ದಶಕಗಳಿಂದ ವಿವಿಧ ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳಲ್ಲಿ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಶರಣಬಸಪ್ಪ ಮಸಳಿಯವರು ಈ ಹಿಂದೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಧ್ಯಕ್ಷರಾಗಿದ್ದ ಅಲ್ಪ ಅವಧಿಯಲ್ಲೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಏಳಿಗೆಗಾಗಿ ಸಾಕಷ್ಟು ಶ್ರಮಿಸಿ, ಎಲ್ಲ ಪತ್ರಕರ್ತರ ಪ್ರಶಂಸೆಗೆ ಪಾತ್ರರಾಗಿದ್ದರು.

