ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ನಗರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ ಕುರಿತು ಬೃಹತ್ ಸೈಕಲ್ ಜಾಥಾ ಆಯೋಜನೆ ಮಾಡುವ ಮೂಲಕ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಿಲ್ಲಾ ಪಂಚಾಯತಿ ಕಾರ್ಯಾಲಯದಿಂದ ಜಾಥಾಕ್ಕೆ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಜಾಥಾವನ್ನು ಉದ್ದೇಶಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಮಾತನಾಡಿ ಯಾವುದೇ ಅರ್ಹ ಮತದಾರರು ಮತದಾನ ಹಕ್ಕಿನಿಂದ ವಂಚಿತರಾಗಬಾರದು ಹಿನ್ನೆಲೆಯಲ್ಲಿ ದಿನಾಂಕ ೦೧-೦೧-೨೦೨೬ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಎಲ್ಲಾ ಅರ್ಹ ಯುವಕ-ಯುವತಿಯರು ಮತದಾರರ ಪಟ್ಟಿಗೆ ತಮ್ಮಹೆಸರು ಸೇರ್ಪಡೆ ಮಾಡುವುದು, ಮೃತಪಟ್ಟ, ಸ್ಥಳಾಂತರಗೊಂಡ ಮತದಾರರ ಹೆಸರು ತೆಗೆದು ಹಾಕುವುದು ಮತ್ತು ವಿಳಾಸ, ಇತರೆ ತಿದ್ದುಪಡಿಗಳನ್ನು ಮಾಡುವುದು. ಈ ವಿಶೇಷ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದರು. ಪ್ರಜಾಪ್ರಭುತ್ವದ ಯಶಸ್ಸು ಪ್ರತಿಯೊಬ್ಬ ಅರ್ಹ ಪ್ರಜೆಯು ಮತ ಚಲಾಯಿಸುವುದರ ಮೇಲೆ ನಿಂತಿದೆ. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು. ೧೮ ವರ್ಷ ತುಂಬಿದ ಪ್ರತಿಯೊಬ್ಬರೂ ತಪ್ಪದೇ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಗಿoಣeಡಿ ಊeಟಠಿಟiಟಿe ಂಠಿಠಿ, ಓಗಿSP ಪೋರ್ಟಲ್ ಟಿvsಠಿ.iಟಿ ಮತ್ತು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು. ನಮೂನೆ ೬ – ಹೊಸ ಸೇರ್ಪಡೆ, ನಮೂನೆ ೭ – ತೆಗೆದುಹಾಕುವಿಕೆ, ನಮೂನೆ ೮ – ತಿದ್ದುಪಡಿ ಕುರಿತು ವಿವರಿಸಿ, ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿದೆಯೇ? ಎಂದು ಪರಿಶೀಲಿಸಿಕೊಳ್ಳಿರಿ. ೧೮ ವರ್ಷ ತುಂಬಿದ ನಿಮ್ಮ ಮನೆಯ ಮಕ್ಕಳ ಹೆಸರನ್ನು ಸೇರ್ಪಡೆಗೊಳಿಸಿ, ಮನೆ ಬದಲಾಯಿಸಿದ್ದರೆ ವಿಳಾಸ ತಿದ್ದುಪಡಿ ಮಾಡಿಕೊಳ್ಳಲು, ಮೃತಪಟ್ಟ ಕುಟುಂಬ ಸದಸ್ಯರ ಹೆಸರನ್ನು ತೆಗೆದುಹಾಕಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಈ ಸೈಕಲ್ ಜಾಥಾವು ಜಿಲ್ಲಾ ಪಂಚಾಯತಿ ಕಾರ್ಯಾಲಯದಿಂದ ಆರಂಭವಾಗಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಜಿಲ್ಲಾಧಿಕಾರಿಗಳ ಕಚೇರಿ,ಗಾಂಧಿ ಚೌಕ, ಸಿದ್ಧೇಶ್ವರ ದೇವಸ್ಥಾನ, ಬಸವೇಶ್ವರ ಚೌಕ ಮೂಲಕ ಗೋಳಗುಮ್ಮಟ ವರೆಗೂ ಸಾಗಿ ಸಮಾವೇಶಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಸೇರಿದಂತೆ ಜಿಲ್ಲಾ ಸ್ವೀಪ್ ಸಮಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

