ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.
ಮೈಸೂರಿನಲ್ಲಿ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ ನಿರ್ದೇಶಕ ಆರ್. ಮಹೇಶ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸರಬೇಶ್ವರ ಕರ್, ಉಪಪ್ರಾಚಾರ್ಯ ಡಾ. ಶಿವಪ್ರಸಾದ ಹುಡೇದ, ಡಾ. ಶ್ರೀಹರಿ ಮುಂತಾದವರು ಉಪಸ್ಥಿತರಿದ್ದರು.
ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಬೋಧಕ ಹಾಗೂ ಬೋಧಕ ಹೊರತಾದ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.

