ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ಜುಲೈ.೬ರ ಸೋಮವಾರ ಮಧ್ಯಾಹ್ನ ೩.೩೦ ರಿಂದ ೪.೩೦ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ದೂರವಾಣಿ ೬೩೬೬೪೨೩೮೮೭ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ
