Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
(ರಾಜ್ಯ ) ಜಿಲ್ಲೆ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜಿಸುವ ನಿಯಮ ವಿರೋಧಿಸಿ ಪಪೂ ಕಾಲೇಜ್ ಉಪನ್ಯಾಸಕರ ಸಂಘ ಸಚಿವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರೌಢಶಾಲೆಗಳ 9 ಮತ್ತು 10ನೇ ತರಗತಿಗಳಿಗೆ ಪದವಿಪೂರ್ವ ಕಾಲೇಜು ಉಪನ್ಯಾಸಕರನ್ನು ನಿಯೋಜಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಕ್ಕೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘ (ರಿ) ವಿಜಯಪುರ ಜಿಲ್ಲಾ ಘಟಕ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈ ಸಂಬಂಧ ಸಂಘವು ಸಿದ್ಧಪಡಿಸಿರುವ 20 ಪುಟಗಳ ಸವಿಸ್ತಾರ ಆಕ್ಷೇಪಣಾ ಮನವಿಯನ್ನು ಜಿಲ್ಲೆಯ ಹಿರಿಯ ಮುಖಂಡರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ .ಬಿ .ಪಾಟೀಲ್ ಅವರಿಗೆ ಸಲ್ಲಿಸಿ, ಸರ್ಕಾರದ ಮಟ್ಟದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ಕರಡು ಅಧಿಸೂಚನೆಯನ್ನು ಹಿಂಪಡೆಯುವಂತೆ ಮನವಿ ಮಾಡಿದೆ.
ಸಂಘದ ಪದಾಧಿಕಾರಿಗಳ ಪ್ರಕಾರ, ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗಳಿಗೆ ನಿಯೋಜಿಸುವುದರಿಂದ ಪದವಿಪೂರ್ವ ಶಿಕ್ಷಣದ ಗುಣಮಟ್ಟಕ್ಕೆ ಧಕ್ಕೆಯಾಗಲಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಆಶಯಕ್ಕೂ ವಿರುದ್ಧವಾಗಲಿದೆ. ಜೊತೆಗೆ ನೀಟ್ , ಜೆಇಇ ಹಾಗೂ ಸಿಇಟಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಅಗತ್ಯವಾದ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಉಪನ್ಯಾಸಕರಿಗೆ ಸಮಯದ ಕೊರತೆಯಾಗುತ್ತದೆ. ಇದರಿಂದ ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದಲ್ಲದೆ, ಗೆಜೆಟೆಡ್ ಗ್ರೂಪ್-ಬಿ ವೃಂದದ ಉಪನ್ಯಾಸಕರನ್ನು ಅವರ ಮೂಲ ಸೇವಾ ನಿಯಮಗಳಿಗೆ ವಿರುದ್ಧವಾಗಿ ಪ್ರೌಢಶಾಲೆಗಳಿಗೆ ನಿಯೋಜಿಸುವುದು ವೃತ್ತಿಪರ ಘನತೆ ಹಾಗೂ ಕಾನೂನುಬದ್ಧ ಸೇವಾ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.
ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದರೆ ಹೊಸ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಆರಂಭಿಸಬೇಕು. ಬದಲಾಗಿ ಪಿಯು ಉಪನ್ಯಾಸಕರನ್ನು ನಿಯೋಜಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಸಂಘ ಒತ್ತಾಯಿಸಿದೆ.
ಸಚಿವ ಎಂ .ಬಿ .ಪಾಟೀಲ್ ಅವರು ಈ ವಿಷಯವನ್ನು ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರ ಗಮನಕ್ಕೆ ತಂದು ಕರಡು ಅಧಿಸೂಚನೆಯನ್ನು ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿದೆ. ಬೇಡಿಕೆಗಳನ್ನು ಸರ್ಕಾರ ಪರಿಗಣಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ವಿಜಯಪುರ ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.