ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸೇತುವೆ ತಡೆಗೋಡೆ ಮುರಿದು ಕೃಷ್ಣಾ ನದಿಗೆ ಬಿದ್ದ ಟಿಪ್ಪರ್ ವಾಹನವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲವಾಗಿದೆ.
ಬೃಹತ್ ಗಾತ್ರದ ಎರಡು ಕ್ರೇನ್‌ಗಳನ್ನು ಬಳಸಿ ಟಿಪ್ಪರ್ ಅನ್ನು ಮೇಲಕ್ಕೆತ್ತಲು ಪ್ರಯತ್ನಿಸಿದರೂ, ಗಾಳಿಯ ರಭಸದಿಂದ ವಾಹನಕ್ಕೆ ಸಮತೋಲನ ಸಿಗದೆ ಕಾರ್ಯಾಚರಣೆ ಕಷ್ಟಸಾಧ್ಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೊಲ್ಹಾರ ಹಾಗೂ ಬೀಳಗಿ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಮ್ಮುಖದಲ್ಲಿ ರಕ್ಷಣಾ ಕಾರ್ಯ ನಡೆಯಿತು.
ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ನಾಲ್ಕು ಗಂಟೆಗಳ ಕಾಲ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಿ, ಪ್ರಯಾಣಿಕರು ಹಾಗೂ ವಾಹನ ಚಾಲಕರು ಸಂಕಷ್ಟ ಅನುಭವಿಸಿದರು. ಪರ್ಯಾಯ ಮಾರ್ಗದ ಬಗ್ಗೆ ಮುಂಚಿತ ಮಾಹಿತಿ ನೀಡದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಯಿತು.
ಟಿಪ್ಪರ್ ಜೊತೆ ನದಿಗೆ ಬಿದ್ದ ಚಾಲಕನ ಸ್ಥಿತಿ ಇನ್ನೂ ತಿಳಿದುಬಂದಿಲ್ಲ.

