Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
(ರಾಜ್ಯ ) ಜಿಲ್ಲೆ

ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ಖುಷ್ಬು ಗೋಯಲ್ ಚೌಧರಿ ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇದ್ದರೆ, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.
ಇದಕ್ಕೆ ಯಾವ ರೀತಿಯ ಮುನ್ನೆಚ್ಚರಿಕಾ ಯೋಜನೆಗಳನ್ನು ರೂಪಿಸಲಾಗಿದೆ ಎಂಬುದರ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು.
ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ನೀರಿನ ಮೂಲಗಳ ಸಂರಕ್ಷಣೆ, ಪರ್ಯಾಯ ನೀರು ಸರಬರಾಜು ವ್ಯವಸ್ಥೆ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡಿರಬೇಕು ಎಂದು ಸೂಚಿಸಿದರು.
ವಿದ್ಯುತ್ ಪೂರೈಕೆ ಸಮರ್ಪಕವಾಗಿ ಆಗುತ್ತಿದೆಯೇ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಹಳ್ಳಿಗಳಿಗೆ ವಿದ್ಯುತ್ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ, ವಿದ್ಯುತ್ ವ್ಯತ್ಯಯಗಳು ಉಂಟಾಗುತ್ತಿವೆಯೇ ಹಾಗೂ ವಿದ್ಯುತ್ ಸಂಪರ್ಕದಿಂದ ವಂಚಿತವಾಗಿರುವ ಯಾವುದೇ ಗ್ರಾಮ ಅಥವಾ ವಸತಿ ಪ್ರದೇಶಗಳಿವೆಯೇ ಎಂಬುದರ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಎಸ್‌ಐಆರ್ ಕಾರ್ಯ ಸುಸೂತ್ರವಾಗಿ ನಡೆಯುತ್ತಿದೆ :ಡಿಸಿ

ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿ, ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು.
ಇದೇ ವೇಳೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಾದ್ಯಂತ ಸುಸೂತ್ರವಾಗಿ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಮನೆ ಮನೆಗೆ ತೆರಳಿ ಗಣತಿ ನಮೂನೆಗಳ ವಿತರಣೆ ಹಾಗೂ ಸಂಗ್ರಹ ಕಾರ್ಯ ಪ್ರಗತಿಯಲ್ಲಿದೆ ಎಂದು ವಿವರಿಸಿದರು.

ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಣೆ :ಸಿಇಓ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಗ್ರಾಮೀಣಾಭಿವೃದ್ಧಿ ಯೋಜನೆಗಳು ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪುವಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ

ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!

ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿದ್ಯುತ್ ವಿತರಣೆಯ ಖಾಸಗೀಕರಣ ರದ್ದು :ರಂಜುಣಗಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆ ಅವ್ಯವಸ್ಥೆ ಖಂಡಿಸಿ ದೀರ್ಘದಂಡ ನಮಸ್ಕಾರ!
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಜಿಸ್ಟಾರ ಕಚೇರಿ: ೨ನೇ ದಿನಕ್ಕೆ ಕಾಲಿಟ್ಟ ಲೋಕಾ ದಾಳಿ
    In (ರಾಜ್ಯ ) ಜಿಲ್ಲೆ
  • ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
    In (ರಾಜ್ಯ ) ಜಿಲ್ಲೆ
  • ಮಳೆ ಅಭಾವ: ಪರಿಸ್ಥಿತಿ ಎದುರಿಸಲು ಸಜ್ಜಾಗಿ
    In (ರಾಜ್ಯ ) ಜಿಲ್ಲೆ
  • ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಬೆಳೆ ವಿವರ ಆ್ಯಪ್‌ನಲ್ಲಿ ದಾಖಲಿಸಿ :ಡಿಸಿ ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ವಿಬಿ-ಜಿ ರಾಮ್-ಜಿ ಯೋಜನೆ: ಪ್ರತಿ ದಿನ ಕೂಲಿ ದರ ೩೮೨ ರೂ. ಹೆಚ್ಚಳ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿಗಳ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.