Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ
(ರಾಜ್ಯ ) ಜಿಲ್ಲೆ

ಸ್ವ ಹಿತವಿಲ್ಲದ ಹಿತಚಿಂತಕ ಫ.ಗು.ಹಳಕಟ್ಟಿ :ಪ್ರಭಾಕರ ಖೇಡದ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ವಚನ ಸಾಹಿತ್ಯ ಸಂಶೋಧನೆ ಮತ್ತು ಮುದ್ರಣಕ್ಕಾಗಿ ಸಾಲಕ್ಕೆ ಅಂಜದೇ ಕಾಲಕ್ಕೆ ನಂಜದೇ ಇಡೀ ತಮ್ಮ ಬದುಕನ್ನು ವಚನ ಸಾಹಿತ್ಯ ಸಂರಕ್ಷಣೆಗಾಗಿ ಸವೆಸಿ 250ಕ್ಕೂ ಹೆಚ್ಚು ಶರಣರ ವಚನಗಳನ್ನು ಊರೂರು ಸುತ್ತಿ ಸಂಗ್ರಹಿಸಿ ಪ್ರಕಟಿಸಿ ನಮಗೆ ಕೊಟ್ಟು ಹೋದವರು ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಇವರು ಸದಾ ಸ್ಮರಣೀಯರಾಗಿದ್ದಾರೆ ಎಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರಭಾಕರ ಖೇಡದ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕಾಡಳಿತವು ಗುರುವಾರ ಹಮ್ಮಿಕೊಂಡಿದ್ದ ಡಾ.ಫ.ಗು.ಹಳಕಟ್ಟಿ ಅವರ 146 ಜಯಂತೋತ್ಸವ, ವಚನ ಸಂರಕ್ಷಣಾ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಅವರು, ವಚನ ಸಾಹಿತ್ಯ ಸಂರಕ್ಷಣೆಯೊಂದಿಗೆ ವಿಜಯಪುರ ಜಿಲ್ಲೆಯ ವಿಕಾಸಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಶಿಕ್ಷಣ ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಅವರು ತೋರುತ್ತಿದ್ದ ಕಾಳಜಿ, ಬರಗಾಲ ನಿವಾರಣ ಕೇಂದ್ರ,ಪ್ರತಿಷ್ಠಿತ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆ ಹಾಗೂ ಶ್ರೀಸಿದ್ದೇಶ್ವರ ಸಹಕಾರಿ ಬ್ಯಾಂಕ್, ಎಸ್.ಎಸ್. ಹೈಸ್ಕೂಲ್ ಹಾಗೂ ವಿಜಯ ಕಾಲೇಜ ಸೇರಿದಂತೆ ಅನೇಕ ಸಹಕಾರಿ ಸಂಘ ಸಂಸ್ಥೆಗಳ ಉದಯಕ್ಕೆ ಮೂಲ ಕಾರಣರಾದವರು. ವಕೀಲರಾಗಿ ಶ್ರದ್ಧೆ,ತ್ಯಾಗ, ಶುದ್ಧ ಹಸ್ತ ಒಂದು ಕಡೆ ಆದರೆ ಹಸಿವು, ಪರಹಿತಕ್ಕಾಗಿ ಸ್ವಂತ ಮನೆ ಮಾರಿದ್ದು, ಕೈಗೆ ಬಂದ ಮಗ ಮರಣಿಸಿದ್ದು ಇನ್ನೊಂದು ಕಡೆ. ಇದಾವುದಕ್ಕೂ ಧೃತಿಗೆಡದೇ 20ನೇ ಶತಮಾನದ ಶರಣರಂತೆ ಬಾಳಿ ತೋರಿಸಿದವರು ಪರಮಪುರುಷ ರಾವ್ ಬಹುದ್ದೂರ್ ಡಾ. ಫ. ಗು.ಹಳಕಟ್ಟಿಯವರು. ಹರಕು ಅಂಗಿಯ ಮೇಲೆ ಕರಿಕೋಟು. ಆಸರೆಗೆ ಬಣ್ಣ ಮಾಸಿದ ಸೈಕಲ್. ವಾಸಿಸಲು ಕೊನೆಯವರೆಗೂ ಬಾಡಿಗೆ ಮನೆ ಇದು ಅವರ ಸರಳ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿತ್ತು ಎಂದು ಅಭಿಪ್ರಾಯಪಟ್ಟರು.
ಡಾ.ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಹಳಕಟ್ಟಿ ಅವರದು ಸರಳ ಜೀವನ ಉನ್ನತ ವಿಚಾರವಾಗಿತ್ತು. ಸರ್ಕಾರ ಅವರ ಜಯಂತಿ ದಿನವನ್ನು ವಚನ ಸಂರಕ್ಷಣಾ ದಿನವನ್ನಾಗಿ ಆಚರಿಸುತ್ತಿರುವುದು ಸ್ತುತ್ಯವಾಗಿದೆ ಎಂದರು.
ಪೂಜಾಸ್ಮರಣೆಯಲ್ಲಿ ಎಸ್ ಕೆ ಸೋಮನಕಟ್ಟಿ, ವಿವೇಕಾನಂದ ಕಲ್ಯಾಣಶೆಟ್ಟಿ, ಬಿ.ಎಸ್. ಪಟ್ಟಣದ,.ಶ್ರೀಶೈಲ ಶಿರಗುಪ್ಪಿ, ಕಾಶಿನಾಥ ಅವಟಿ,ಐ.ಜಿ. ಬೆಕಿನಾಳ, ಲಕ್ಷ್ಮಣ ಮೇತ್ರಿ, ಶಿವಾನಂದ ತುಬಾಕಿ, ವಿಲಾಸ ಜಾಡರ, ಎನ್. ಎನ್. ಹೊಸಮನಿ, ತಹಸೀಲ್ದಾರ ಕಚೇರಿ ಸಿಬ್ಬಂದಿ ಇತರರು ಇದ್ದರು.
ಶ್ರೀಶೈಲ ಶಿರಗುಪ್ಪಿ ಸ್ವಾಗತಿಸಿದರು. ಸಿದ್ದು ಶಿರಶ್ಯಾಡ ನಿರೂಪಿಸಿದರು. ಎಸ್. ಬಿ. ಅಂಕದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.