ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಸತತ ೨೪ ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಎಮ್‌ಎಸಿಪಿ ನಾಯಕ ಸುಭೇದಾರನಾಗಿ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಹಂಚಲಿ ಗ್ರಾಮಕ್ಕೆ ಆಗಮಿಸುತ್ತಿರುವ ಕಾಶೀರಾಯ ಕಾಮನಕೇರಿ ಇವರ ಸ್ವಾಗತ ಹಾಗೂ ಸನ್ಮಾನ ಸಮಾರಂಭ ಇಂದು (ಭಾನುವಾರ) ಜರುಗಲಿದೆ.
ತಾಲ್ಲೂಕಿನ ಹಂಚಲಿ ಗ್ರಾಮದ ಹನುಮಾನ ದೇವಸ್ಥಾನ ಆವರಣದಲ್ಲಿ ಮಧ್ಯಾನ್ಹ ೨ ಘಂಟೆಗೆ ಆರಂಭಗೊಳ್ಳಲಿರುವ ಕಾರ್ಯಕ್ರಮದ ಸಾನಿಧ್ಯವನ್ನು ತಾಳಿಕೋಟಿ ಖಾಸ್ಗತೇಶ್ವರಮಠದ ಸಿದ್ಧಲಿಂಗ ದೇವರು, ಬೋರಗಿ ಪುರದಾಳಮಠದ ಮಹಾಲಿಂಗೇಶ್ವರ ಸ್ವಾಮೀಜಿ ಹಾಗೂ ಸ್ಥಳೀಯ ಶರಣಯ್ಯ ಮಠ ವಹಿಸಲಿದ್ದಾರೆ.
ತಹಶೀಲ್ದಾರ ವಿನಯಾ ಹೂಗಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿ ಆರ್.ಬಿ.ದಮ್ಮೂರಮಠ ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಪಂಚಾಯಿತಿ ಸದಸ್ಯರು, ಹಿರಿಯರು ಭಾಗವಹಿಸಲಿದ್ದಾರೆ ಎಂದು ಮಾಜಿ ಸೈನಿಕರ ಸಂಘ ಹಾಗೂ ಕಾರ್ಗಿಲ್ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

