ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದಲ್ಲಿ ಒಂದು ದಿನದ ಉದ್ಯಮಶೀಲತಾ ಅರಿವು ಕಾರ್ಯಕ್ರಮ
ಜು. ೭ರಂದು ಬೆಳಗ್ಗೆ ೧೦ ಗಂಟೆಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಉದ್ಯಮಶೀಲತೆ, ಸ್ಥಾಪಿಸಬಹುದಾದ ಉದ್ಯಮಗಳು, ಕೈಗಾರಿಕಾ ಇಲಾಖೆ ಮತ್ತು ಬ್ಯಾಂಕಿನಿಂದ ದೊರೆಯುವ ಸಹಾಯ ಮತ್ತು ಯಶಸ್ವಿ ಉದ್ಯಮದಾರರೊಂದಿಗೆ ಚರ್ಚೆ ಏರ್ಪಡಿಸಲಾಗುವುದು. ಆಸಕ್ತರು ಮೊಬೈಲ್ ಸಂಖ್ಯೆ: ೯೧೦೮೭೧೬೬೧೮ ಹಾಗೂ ೮೭೬೨೪೮೩೪೭೮ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದೆಂದು ಸಿಡಾಕ್‌ನ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
