Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
(ರಾಜ್ಯ ) ಜಿಲ್ಲೆ

ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಮನುಷ್ಯ ತನ್ನ ಬದುಕನ್ನು ತಾನೇ ಕಟ್ಟಿಕೊಳ್ಳಬೇಕಲ್ಲದೇ ಬೇರಾರಿಂದಲೂ ಕಟ್ಟಿಕೊಡಲು ಸಾಧ್ಯವಿಲ್ಲ. ಜೀವನದ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಅವಶ್ಯವೆಂದು ಬಾಳೇಹೊನ್ನೂರು ಶ್ರೀರಂಭಾಪುರಿ ಜಗದ್ಗುರು ಡಾ.ವೀರಸೋಮೇಶ್ವರಶ್ರೀಗಳು ಹೇಳಿದರು.
ತಾಲ್ಲೂಕಿನ ಯಾಳವಾರ ಗ್ರಾಮದ ಶ್ರೀಸೋಮೇಶ್ವರ ವಿದ್ಯಾವರ್ಧಕ ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಭಾನುವಾರ ಜರುಗಿದ ನೂತನ ಪ್ರೌಢಶಾಲಾ ಕಟ್ಟಡ ಮತ್ತು ವಿದ್ಯಾರ್ಥಿ ನಿಲಯ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಮಾತನಾಡಿದರು.
ಮೌಲ್ಯಗಳ ಉಳಿವು ಅಳಿವು ಮಾನವನ ಆಚರಣೆಯಲ್ಲಿವೆ. ನೀತಿ ಸಂಹಿತೆಯನ್ನು ಅರಿತವನಿಗೆ ನೆಮ್ಮದಿಯ ಫಲ. ವಿಚಾರ ವಿಮರ್ಶೆಗಳು ಸಂಸ್ಕೃತಿಯ ಮೇಲೆ ಹೊಸ ಬೆಳಕು ಮೂಡಿಸಬೇಕೇ ಹೊರತು ಜನರನ್ನು ನಾಸ್ತಿಕರನ್ನಾಗಿ ಮಾಡಬಾರದು. ತಾಳ್ಮೆ ಮತ್ತು ಸಹನೆಯ ಗುಣ ಮನುಷ್ಯನಲ್ಲಿ ಇಲ್ಲದಿರುವುದೇ ಇಂದಿನ ಅಶಾಂತಿ ಮತ್ತು ಅತೃಪ್ತಿಗೆ ಕಾರಣವೆಂದರೆ ತಪ್ಪಾಗದು. ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗೊತ್ತು ಗುರಿಗಳಿಲ್ಲದ ಜೀವನ ಹಣ ಸಂಪಾದನೆಯನ್ನು ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಶಿಕ್ಷಣದಿಂದ ಬುದ್ಧಿ ಶಕ್ತಿ ಬೆಳೆದರೆ ಧರ್ಮದಿಂದ ಭಾವನೆಗಳು ಬೆಳೆಯುತ್ತವೆ. ಬೆಳೆಯುವ ಮನುಷ್ಯನಿಗೆ ಇವೆರಡರ ಅವಶ್ಯಕತೆಯಿದೆ. ಯಾಳವಾರ ಗ್ರಾಮದ ಹಿರಿಯರು ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘ ಸ್ಥಾಪಿಸಿ ತನ್ಮೂಲಕ ಪ್ರೌಢಶಾಲೆ ಮತ್ತು ವಿದ್ಯಾರ್ಥಿ ನಿಲಯ ಮುನ್ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿ. ಐವತ್ತು ವರ್ಷ ತುಂಬಿದ ಸುಸಂದರ್ಭದಲ್ಲಿ ನೂತನ ಪ್ರೌಢಶಾಲೆ ಕಟ್ಟಡ ಮತ್ತು ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನೆಗೊಂಡಿರುವುದು ಸಂತೋಷದ ಸಂಗತಿ ಎಂದರು.
ಮುದ್ದೇಬಿಹಾಳ ಶಾಸಕ ಸಿ.ಎಸ್. ನಾಡಗೌಡ ಅವರು ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಆಧುನಿಕ ಕಾಲದಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಿರುವುದು ಸಂತೋಷದ ಸಂಗತಿ. ವಿದ್ಯೆಯ ಜೊತೆಗೆ ವಿನಯ ಮತ್ತು ಸಂಸ್ಕಾರವಂತರಾಗಿ ಬಾಳಿದರೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯ. ವಿದ್ಯಾ ಸಂಸ್ಥೆಯ ಉನ್ನತಿಗಾಗಿ ಶ್ರಮಿಸಿದ ಯಾಳವಾರ ಗ್ರಾಮದ ಜನರ ಶಿಕ್ಷಣ ಪ್ರೇಮ ಇಷ್ಟೆಲ್ಲ ಅಭ್ಯುದಯಕ್ಕೆ ಕಾರಣವಾಗಿದೆ ಎಂದರು.
ಯಾಳವಾರ ಗುರುಮಠದ ದಾರುಕಲಿಂಗ ಶ್ರೀ ಮಾತನಾಡಿ, ಮನುಷ್ಯ ಜೀವನದಲ್ಲಿ ಗುರಿಯಿಲ್ಲದ ಗುರಿ ಸಾಧಿಸದ ಜೀವನ ವ್ಯರ್ಥ. ಜೀವನದ ಉನ್ನತಿ ಉತ್ಕರ್ಷತೆಗಾಗಿ ಶಿಕ್ಷಣ ಎಲ್ಲರಿಗೂ ಅವಶ್ಯಕ ಎಂದರು.
ಆಲಮೇಲ ಹಿರೇಮಠದ ಚಂದ್ರಶೇಖರಶ್ರೀ ಮಾತನಾಡಿ, ಯಾಳವಾರ ಗ್ರಾಮದ ಜನತೆ ಉತ್ತಮ ವಿದ್ಯಾಸಂಸ್ಥೆ ಕಟ್ಟಿ ಗ್ರಾಮೀಣ ವಿದ್ಯಾರ್ಥಿಗಳ ಬಾಳ ಬದುಕಿಗೆ ಬೆಳಕು ತೋರಿದ್ದಾರೆ ಎಂದರು.
ಡಾ|| ಮಂಜುಳಾ ಪಾಟೀಲ ಆರೋಗ್ಯದ ಕುರಿತು, ಅಶೋಕ ಹಂಚಲಿ, ವ್ಹಿ.ಬಿ.ಮಳಗಿ, ವ್ಹಿ.ಡಿ.ಐಹೋಳೆ ಶಿಕ್ಷಣದ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಜಾಲಹಳ್ಳಿ ಜಯಶಾಂತಲಿಂಗೇಶ್ವರ ಶ್ರೀಗಳು, ಕಡಕೋಳ ರಾಜಗುರು ಮಹಾಲಿಂಗ ಸ್ವಾಮೀಜಿ, ದೇವರಹಿಪ್ಪರಗಿ ಶಿವಯೋಗಿಸ್ವಾಮಿ ಉಪಸ್ಥಿತರಿದ್ದರು. ವಿದ್ಯಾವರ್ಧಕ ಸಂಘ ಹಾಗೂ ಪಿಕೆಪಿಎಸ್ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ೧೯೭೦ ರಿಂದ ೨೦೨೬ ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿ, ವಿದ್ಯಾರ್ಥಿನೀಯರನ್ನು ಸನ್ಮಾನಿಸಲಾಯಿತು.
ಮಾಜಿ ಶಾಸಕರಾದ ಸೋಮನಗೌಡ ಪಾಟೀಲ(ಸಾಸನೂರ), ಶರಣಪ್ಪ ಸುಣಗಾರ, ಅರುಣ ಶಹಾಪೂರ, ಬಸನಗೌಡ ಲಿಂಗದಳ್ಳಿ(ಚಬನೂರ) ಸಂಜಯ ಪಾಟೀಲ(ಕನಮಡಿ), ಸುಭಾಸ ಛಾಯಾಗೋಳ, ಆನಂದಗೌಡ ದೊಡಮನಿ, ಸಚೀನಗೌಡ ಪಾಟೀಲ(ಕುದರಿ ಸಾಲವಾಡಗಿ), ಭೀಮನಗೌಡ ಪಾಟೀಲ, ಶರಣಗೌಡ ಮೂಲಿಮನಿ, ಬಸಯ್ಯ ಹಿರೇಮಠ, ಬಿ.ವೈ.ಭಂಟನೂರ, ಜಿ.ಆರ್.ಕುಂಬಾರ ಶ್ರೀಮತಿ ಸುನಂದಾ ಜಾಲವಾದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.