Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
(ರಾಜ್ಯ ) ಜಿಲ್ಲೆ

ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಕ್ಕಮಗಳೂರು ಜಿಲ್ಲಾ ಸಂಘಕ್ಕೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರ ಭೇಟಿ

ಉದಯರಶ್ಮಿ ದಿನಪತ್ರಿಕೆ

ಚಿಕ್ಕಮಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಚಿಕ್ಕಮಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಭೇಟಿ ನೀಡಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಸಂಘಟನೆಯನ್ನು ವೃತ್ತಿಬದ್ಧವಾಗಿ ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಸಂಘವನ್ನು ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.
ಒಂದು ಕಾಲದಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಸಂಘವನ್ನು ಮತ್ತೆ ಅದೇ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಎಲ್ಲರ ಮೇಲಿದೆ. ವೈಮನಸ್ಸುಗಳನ್ನು ಬದಿಗೊತ್ತಿ ಸಂಘದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧ್ಯಕ್ಷ ಅನಿಲ್ ಆನಂದ್ ಅವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಘಟಕಗಳನ್ನು ರಚಿಸಿರುವುದು ಶ್ಲಾಘನೀಯ. ಈ ಕಾರ್ಯದಲ್ಲಿ ರಾಜ್ಯ ಉಪಾಧ್ಯಕ್ಷ ಎಚ್.ಬಿ. ಮದನಗೌಡ ಅವರ ಪರಿಶ್ರಮ ಹಾಗೂ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್ ಅವರ ಸಹಕಾರವೂ ಮಹತ್ವದ್ದಾಗಿದೆ ಎಂದು ಹೇಳಿದರು.
ಕೆಯುಡಬ್ಲ್ಯೂಜೆ ಜೊತೆಗೆ ಮುಂದುವರಿಯಲು ನಿರ್ಧರಿಸಿರುವ ಜಯಕುಮಾರ್ ಅವರ ತೀರ್ಮಾನ ಸ್ವಾಗತಾರ್ಹವಾಗಿದೆ. ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್ ಸಭೆಯಲ್ಲಿ ಭಾಗವಹಿಸಿ ಸಂಘವನ್ನು ಮತ್ತಷ್ಟು ಬಲಪಡಿಸಲು ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿರುವುದು ಸಂತಸದ ಸಂಗತಿ ಎಂದು ಹೇಳಿದರು.
ಸಭೆಯಲ್ಲಿ ಜುಲೈ 25ರಂದು ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಸಂಘದ ಅಧಿಕಾರ ಸ್ವೀಕಾರ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಕಲ್ಯಾಣ್ ಕುಮಾರ್, ಜಿಲ್ಲಾಧ್ಯಕ್ಷ ಅನಿಲ್ ಆನಂದ್, ಹಿರಿಯ ಪತ್ರಕರ್ತ ದಿನೇಶ್ ಪಟವರ್ಧನ್, ಜಯಕುಮಾರ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಹಿರಿಯ ಮತ್ತು ಕಿರಿಯ ಸದಸ್ಯರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ

ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ

ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ

ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹೆಣ್ಣು ಹೆತ್ತಳೆಂದು ದೂರದಿರಿ, ಇದಕ್ಕೆ ಪುರುಷನೇ ಹೊಣೆಗಾರ
    In ವಿಶೇಷ ಲೇಖನ
  • ವೃತ್ತಿ ಬದ್ದವಾಗಿ ಸಂಘಟನೆ ಬಲಪಡಿಸಲು ತಗಡೂರ ಕರೆ
    In (ರಾಜ್ಯ ) ಜಿಲ್ಲೆ
  • ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಯಿಂದ ಕೃಷ್ಣೆಗೆ ವಿಶೇಷ ಪೂಜೆ
    In (ರಾಜ್ಯ ) ಜಿಲ್ಲೆ
  • ಎಸ್ ಐ ಆರ್: ನಾಗಠಾಣ ಕ್ಷೇತ್ರದಲ್ಲಿ ಶೇ.63.02ರಷ್ಟು ಪ್ರಗತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಮಾದರ ಮಹಾಸಭಾದ ಸದಸ್ಯತ್ವ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಕಬ್ಬು ಬೆಳೆಗೆ ಕೃತಕ ತಂತ್ರಜ್ಞಾನ ಬಳಸಿದರೆ ಅಧಿಕ ಬೆಳೆಯಲು ಸಾಧ್ಯ
    In (ರಾಜ್ಯ ) ಜಿಲ್ಲೆ
  • ಜೀವನ ವಿಕಾಸಕ್ಕೆ ಶಿಕ್ಷಣ ಅವಶ್ಯಕ :ರಂಭಾಪುರಿ ಜಗದ್ಗುರು
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಸುಸಜ್ಜಿತ ಕಾಮಗಾರಿಗೆ ಕೈ ಜೋಡಿಸಿ :ಮನಗೂಳಿ
    In (ರಾಜ್ಯ ) ಜಿಲ್ಲೆ
  • ಟಿ.ಎ.ಪಿ.ಸಿ.ಎಂ.ಎಸ್ ಚುನಾವಣೆಯಿಂದ ಎಂ.ಡಿ ಮಂಚಯ್ಯ ಅನರ್ಹ
    In (ರಾಜ್ಯ ) ಜಿಲ್ಲೆ
  • ಕೋಟ್ಯಾಳದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.