Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»‘ಬಾಬೂಜಿ’ ರಾಜಕೀಯ ಸೇವೆ ಯುವಪೀಳಿಗೆಗೆ ಮಾದರಿ :ರವಿಚಂದ್ರ
(ರಾಜ್ಯ ) ಜಿಲ್ಲೆ

‘ಬಾಬೂಜಿ’ ರಾಜಕೀಯ ಸೇವೆ ಯುವಪೀಳಿಗೆಗೆ ಮಾದರಿ :ರವಿಚಂದ್ರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್ ಡಿ ಕೋಟೆ: ಭಾರತದ ರಾಜಕೀಯ ಇತಿಹಾಸದಲ್ಲಿ ಐದು ದಶಕಗಳ ಕಾಲ ಅತ್ಯುನ್ನತ ಸೇವೆ ಸಲ್ಲಿಸಿ ಯುವ ಪೀಳಿಗೆಗೆ ಡಾ. ಬಾಬು ಜಗಜೀವನ್ ಜೀವನ್ ರಾಂ ಮಾದರಿಯಾಗಿದ್ದಾರೆ ಎಂದು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ರವಿಚಂದ್ರ ಹೇಳಿದರು.
ಪಟ್ಟಣದ ಬಾಬು ಜಗಜೀವನ್ ರಾಂ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ‌ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ಜೀವನ್ ರಾಂ ರವರ 40ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 1946 -1952 ರವರೆಗೆ ಭಾರತದ ಕಾರ್ಮಿಕ ಸಚಿವರಾಗಿದ್ದಾಗ, ಕಾರ್ಮಿಕರ ಹಿತಾಸಕ್ತಿಗಾಗಿ ಡಾ. ಬಾಬು ಜಗಜೀವನ್ ಜೀವನ್ ರಾಂ ಅವರು ಹಲವಾರು ಮಹತ್ವದ ಕಾನೂನುಗಳನ್ನು ಜಾರಿಗೆ ತಂದರು. ಅದರಲ್ಲಿ 1948ರಲ್ಲಿ ಕಾರ್ಮಿಕರಿಗೆ ಕೆಲಸಕ್ಕೆ ತಕ್ಕಂತೆ ಕನಿಷ್ಠ ವೇತನ ಖಾತ್ರಿಪಡಿಸುವ ಕಾಯ್ದೆ ತಂದು, ಕಾರ್ಮಿಕರ ಜೀವನ ಸುಧಾರಣೆಗೆ ಶ್ರಮಿಸಿದರು ಎಂದು ಹೇಳಿದರು.
ತಾಲೂಕು ಮಾದಾರ ಮಹಾಸಭಾ ಅಧ್ಯಕ್ಷ ಪರಶಿವಮೂರ್ತಿ ಮಾತನಾಡಿ, ಡಾ.ಬಾಬು ಜಗಜೀವನ್ ರಾಂ ಅವರು ಈ ರಾಷ್ಟ್ರ ಕಂಡ ಶ್ರೇಷ್ಠ ರಾಜಕೀಯ ಮುತ್ಸದಿ, ದಲಿತರ, ತುಳಿತಗೊಳಗಾದವರ, ಶ್ರಮಿಕರ ಹಾಗೂ ಎಲ್ಲಾ ವರ್ಗದ ಅಭಿವೃದ್ಧಿಯ ಪೂರಕವಾಗಿ ಅವರ ಜೀವನವನ್ನು ಮುಡುಪಾಗಿಟ್ಟ ಮಹಾನ್ ಚೇತನ. ಅವರ ಚಿಂತನೆಗಳು ಯುವಜನತೆಗೆ ಸದಾ ಪ್ರೇರಣೆಯಾಗಿದ್ದು, ನಾವು ಅವರ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು, ಅವರ ಮಾರ್ಗದಲ್ಲಿ ನಡೆಯಬೇಕಾಗಿದೆ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಸುರೇಶ್ ಮಾತನಾಡಿ, ಇದೇ ಮೊದಲ ಬಾರಿಗೆ ಬಾಬು ಜಗಜೀವನ್ ರಾಂ ಭವನದಲ್ಲಿ ಕಾರ್ಯಕ್ರಮ ಮಾಡಿರುವುದು ಸಂತೋಷದ ವಿಷಯ. ನಮ್ಮ ದೇಶವು ಇತರ ದೇಶಗಳ ಸಾಲಿನಲ್ಲಿ ನಿಲ್ಲಲು ಮಹನೀಯರ ಕೊಡುಗೆ ಅಪಾರ. ದೇಶವು ಸ್ವಾವಲಂಬಿಯಾಗಿ ಆಹಾರ ಪದಾರ್ಥಗಳನ್ನು ಹೆಚ್ಚಿಸಿಕೊಳ್ಳಲು ಇವರ ಪಾತ್ರ ಅನನ್ಯವಾಗಿದೆ. ಸಮುದಾಯದ ಬೇಡಿಕೆಯಾದ ಭವನದ ಪಕ್ಕದಲ್ಲಿ ಅಡುಗೆ ಮನೆಯನ್ನು ನಿರ್ಮಿಸಲು ಹೆಚ್ಚುವರಿಯಾಗಿ ಜಾಗವನ್ನು ಅಳತೆ ಮಾಡಿ ಸಮುದಾಯಕ್ಕೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ್ ರಾಂ ವಿಚಾರ ವೇದಿಕೆ ಅಧ್ಯಕ್ಷ ಸಿ. ತಿಮ್ಮಯ್ಯ, ಮಾಜಿ ಅಧ್ಯಕ್ಷ ಪಿ.ನಾಗರಾಜ್, ಸರಗೂರು ತಾಲೂಕು ಮಾದಾರ ಮಹಾಸಭಾ ಅಧ್ಯಕ್ಷ ಬೆಟ್ಟಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಸಬ್ ಇನ್ಸ್ಪೆಕ್ಟರ್ ಚಿಕ್ಕನಾಯಕ, ಸಮಾಜ ಕಲ್ಯಾಣ ಅಧಿಕಾರಿ ರಮೇಶ್, ಪರಿಶಿಷ್ಟ ಪಂಗಡ ಅಧಿಕಾರಿ ಮಹೇಶ್, ನಾಗರಾಜ್, ಎಇಇ ಚಂದು ಕುಮಾರ್, ಮಾತಂಗ ಜನ ಜಾಗೃತಿ ವೇದಿಕೆ ಅಧ್ಯಕ್ಷ ರವೀಶ್, ಚಾ ನಂಜುಂಡಮೂರ್ತಿ, ಜೀವಿಕ ಬಸವರಾಜು, ಪುಟ್ಟಮಾದು, ಉಡ ನಾಗರಾಜ್, ವೆಂಕಟೇಶ್, ಶಿವಯ್ಯ, ಡಿ. ನಾಗರಾಜ್, ಚೆಲುವರಾಜ್, ಮುದ್ದು ಮಲ್ಲಯ್ಯ, ಮಹಾಲಿಂಗಯ್ಯ, ಸೋಮು ಪಟೇಲ್, ಭೋಗೇಶ್ವರ ಕಾಲೋನಿ ತಿಮ್ಮರಾಜು, ಆನಗಟ್ಟಿ ದೇವರಾಜ್, ವೆಂಕಟಪ್ಪ, ಜಶೀಲಾ, ಸಿ.ಕಾಳಪ್ಪಾಜಿ, ಗಿರಿ ಪ್ರಸಾದ್ ಸಿಂಗಯ್ಯ, ಚಿಕ್ಕಸ್ವಾಮಿ, ಶಿವರಾಜ್, ಪೇಂಟ್ ನಾಗರಾಜ್, ಮಹೇಶ್, ಚನ್ನಪ್ಪ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಭಾಗವಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ

ಜು.೧೦ ರಂದು ತರಬೇತಿ, ಇ-ಹರಾಜು

ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
    In (ರಾಜ್ಯ ) ಜಿಲ್ಲೆ
  • ಡಾ.ಹಳಕಟ್ಟಿಯವರಿಂದ ವಚನ ಸಾಹಿತ್ಯದ ಸಮಗ್ರ ದರ್ಶನ :ಡಾ.ಮದಭಾವಿ
    In (ರಾಜ್ಯ ) ಜಿಲ್ಲೆ
  • ಜು.೧೦ ರಂದು ತರಬೇತಿ, ಇ-ಹರಾಜು
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ಕುರಿತು ವದಂತಿ ಹರಡಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ಬರ: ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ
    In (ರಾಜ್ಯ ) ಜಿಲ್ಲೆ
  • ಮಳೆಗಾಗಿ ಗ್ರಾಮಸ್ಥರಿಂದ ಗುರ್ಜಿ ಪೂಜೆಗೆ ಮೊರೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ :ಕೊಪ್ಪಳ
    In (ರಾಜ್ಯ ) ಜಿಲ್ಲೆ
  • ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕು ಕಸಿವ ಕುತಂತ್ರ
    In (ರಾಜ್ಯ ) ಜಿಲ್ಲೆ
  • 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.