Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಡಿವಾಳ ಸಮಾಜ ಎಸ್ಸಿ ವರ್ಗಕ್ಕೆ ಸೇರಬೇಕಿತ್ತು :ಎಂಎಲ್ಸಿ ರಘು
(ರಾಜ್ಯ ) ಜಿಲ್ಲೆ

ಮಡಿವಾಳ ಸಮಾಜ ಎಸ್ಸಿ ವರ್ಗಕ್ಕೆ ಸೇರಬೇಕಿತ್ತು :ಎಂಎಲ್ಸಿ ರಘು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಚ್.ಡಿ.ಕೋಟೆ: ಭಾರತೀಯ ಜನತಾ ಪಾರ್ಟಿಯಲ್ಲಿಮತಬ್ಯಾಂಕ್ ರಾಜಕಾರಣಕ್ಕೆ ಮನೆಹಾಕದೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ, ಅವರಿಗೆ ರಾಜಕೀಯ ಸ್ಥಾನಮಾನ ಕೊಡುತ್ತಾರೆ ಎಂಬುದಕ್ಕೆ ನಾನೇ ಜೀವಂತ ನಿದರ್ಶನ ಎಂದು ವಿಧಾನ ಪರಿಷತ್ ಸದಸ್ಯ ರಘು ಆರ್ ಕೌಟಿಲ್ಯ ಅಭಿಪ್ರಾಯಪಟ್ಟರು.
ತಾಲೂಕಿಗೆ ಆಗಮಿಸಿದ ಅವರು ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾಯಕ ಸಮುದಾಯದ ಮುಖಂಡರನ್ನು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭೇಟಿ ಮಾಡಿ, ಚರ್ಚಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ೧೨ನೇ ಶತಮಾನದ ಬಸವಣ್ಣನವರ ಕಾಯಕ ತತ್ವ ಮತ್ತು ನಾಲ್ವಡಿ ಮಹಾರಾಜರ ಕನಸಿಗೆ ಪೂರಕವಾಗಿ ಬಿಜೆಪಿ ಹೆಜ್ಜೆ ಹಾಕುತ್ತಿದೆ. ಎಲ್ಲಾ ಸಮುದಾಯಗಳಿಗೂ ರಾಜಕೀಯ ಶಕ್ತಿ ಕೊಡುವ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸರ್ವ ಸಮಾಜಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ೨೦೨೮ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಹಿಂದುಳಿದ ಸಮುದಾಯಗಳು, ಅತಿ ಹಿಂದುಳಿದ ಸಮುದಾಯಗಳು, ವೃತ್ತಿ ಆಧಾರಿತ ಸಮುದಾಯಗಳು, ಕಾಯಕ ಸಮುದಾಯಗಳ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ನಾನು ಹೆಚ್ ಡಿ ಕೋಟೆಗೆ ಬಂದು ಎಲ್ಲಾ ಸಮುದಾಯಗಳ ಮುಖಂಡರ ಜೊತೆ ಚರ್ಚೆ ನಡೆಸಿದ್ದೇನೆ, ನಿಮ್ಮ ಜೊತೆ ನಾನು ಮತ್ತು ನಮ್ಮ ಪಕ್ಷ ಸದಾ ಇರುತ್ತೆ ಎಂಬ ಆತ್ಮವಿಶ್ವಾಸ ತುಂಬಿದ್ದೇನೆ ಎಂದರು.
ಅಸ್ಪೃಶ್ಯತೆಗೊಳಗಾದ ನೂರಾರು ಸಮುದಾಯಗಳು ಇಲ್ಲಿಯವರೆಗೂ ವಿಧಾನಸೌಧ ಬಾಗಿಲನ್ನೇ ನೋಡಿಲ್ಲ. ಆ ಸಮುದಾಯಗಳು ವಿಧಾನಸೌಧ ಪ್ರವೇಶ ಮಾಡಿದ್ದಾಗ ಮಾತ್ರ ನಿಜವಾದ ಪ್ರಜಾಪ್ರುಭುತ್ವದ ಸ್ವಾತಂತ್ರ ಆಶಯ ಈಡೇರುತ್ತೆ. ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಮತಬ್ಯಾಂಕ್ ರಾಜಕಾರಣಕ್ಕೆ ಒತ್ತು ನೀಡದೆ ಸಾಮಾಜಿಕ ಬದ್ಧತೆಯಲ್ಲಿ ಮುಂದೆ ಸಾಗುತ್ತಿದೆ. ಮಡಿವಾಳ ಸೇರಿದಂತೆ ಅನೇಕ ಕಾಯಕ ಸಮುದಾಯಗಳು ಆಧುನಿಕ ತಂತ್ರಜ್ಞಾನ ಒತ್ತಡಕ್ಕೆ ಸಿಲುಕಿ ಇತ್ತ ಭೂಮಿ, ವೃತ್ತಿಯೂ ಇಲ್ಲದೆ ಅತ್ತ ಮೀಸಲಾತಿ ಸೌಲಭ್ಯವೂ ಇಲ್ಲದೇ ಬದುಕು ಕಟ್ಟಿಕೊಳ್ಳಲು ಹರಸಾಹಸಪಡುತ್ತಿವೆ. ಅಂತಹ ಅವಕಾಶವಂಚಿತ ಸಮುದಾಯಗಳಿಗೆ ನಾನು ಧ್ವನಿಯಾಗಿ ಕೆಲಸ ಮಾಡಲು ಹಾಗೂ ಸದನದ ಹೊರಗೆ, ಸದನದ ಒಳಗೆ ನಿಂತು ಹೋರಾಟ ಮಾಡಲು ಬಿಜೆಪಿ ನನಗೆ ಅವಕಾಶ ಮಾಡಿಕೊಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ರಘು ಆರ್ ಕೌಟಿಲ್ಯ ಹೇಳಿದರು.
ಜಿಲ್ಲಾ ಒಬಿಸಿ ಅಧ್ಯಕ್ಷ ರಾಜುಗೌಡ, ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಟಿ ವೆಂಕಟೇಶ್, ಮಡಿವಾಳ ಸಮಾಜದ ತಾಲೂಕು ಅಧ್ಯಕ್ಷರಾದ ಚಂದ್ರ ಶೆಟ್ಟಿ, ಸರಗೂರು ಧರಣೇಶ್, ರಮೇಶ್, ಕಾರ್ಯದರ್ಶಿ ಹೇಮಂತ್, ವೆಂಕಟೇಶ್, ಮೊತ್ತ ಬಸವರಾಜು, ಕಾರ್ಯದರ್ಶಿ ಗುರುಸ್ವಾಮಿ, ರಾಜು ಬಿಡುಗಲು, ರಾಮಾಚಾರಿ, ಒಬಿಸಿ ತಾಲೂಕು ಅಧ್ಯಕ್ಷ ಬಸವರಾಜಚಾರಿ, ಚಂದ್ರಮೌಳೇಶ್ವರ, ವಿವೇಕಾನಂದ, ಕೆ ಲೋಕೇಶ್, ಕೆಂಪು ಶೆಟ್ಟಿ, ವಸಂತ್ ಕುಮಾರ್, ರವಿ, ಮಂಜುನಾಥ್, ಕೃಷ್ಣ, ರವಿಕುಮಾರ್, ಸುರೇಶ್, ಮಹದೇವ ಶೆಟ್ಟಿ, ಬಸವರಾಜ್ ಕೋಟೆ ಹಾಗೂ ಕಾಯಕ ಸಮುದಾಯದ ಮುಖಂಡರು ಇದ್ದರು.

ನ್ಯಾಯಯುತ ಬೇಡಿಕೆಗೆ ಧ್ವನಿಯಾಗುತ್ತೇನೆ

ಸಮುದಾಯದ ವೃತ್ತಿ, ಕುಲಶಾಸ್ತ್ರ ಅಧ್ಯಯನ ಪ್ರಕಾರ ಮಡಿವಾಳ ಮತ್ತು ಸವಿತಾ ಸಮಾಜ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಬೇಕಾಗಿತ್ತು. ಈಗಲೂ ಈ ಎರಡು ಸಮಾಜಗಳು ಅಸ್ಪೃಶ್ಯತೆ ವ್ಯವಸ್ಥೆಯಲ್ಲಿ ಸಿಲುಕಿ ಬದುಕು ಕಟ್ಟಿಕೊಳ್ಳಲು ಒದ್ದಾಡುತ್ತಿವೆ. ಇವರ ನ್ಯಾಯಯುತ ಬೇಡಿಕೆಗೆ ನಾನು ಧ್ವನಿಯಾಗುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ರಘು ಆರ್ ಕೌಟಿಲ್ಯ ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026

ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ

ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ

ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 30 , 2026
    In ದಿನಪತ್ರಿಕೆ
  • ಪತ್ರಕರ್ತನಿಗೆ ಜೀವಬೆದರಿಕೆ ಹಾಕಿದ ದುಷ್ಕರ್ಮಿಗಳ ನಡೆಗೆ ಖಂಡನೆ
    In (ರಾಜ್ಯ ) ಜಿಲ್ಲೆ
  • ದೇಶದಲ್ಲಿ ವೃದ್ದಾಶ್ರಮಗಳು ಬೆಳೆಯುತ್ತಿರುವುದು ಆತಂಕಕಾರಿ
    In (ರಾಜ್ಯ ) ಜಿಲ್ಲೆ
  • ಇಂದು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ
    In (ರಾಜ್ಯ ) ಜಿಲ್ಲೆ
  • ಪಿಓಪಿ ಗಣೇಶ ಬದಲು ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ
    In (ರಾಜ್ಯ ) ಜಿಲ್ಲೆ
  • ಪ್ರಧಾನಿ ಮೋದಿ ಸಮ್ಮುಖದಲ್ಲಿ ಶಿಫಾ ಜಮಾದಾರ ವಿಚಾರ ಮಂಡನೆ
    In (ರಾಜ್ಯ ) ಜಿಲ್ಲೆ
  • ಕ್ರೀಡೆ ನಾಯಕತ್ವ, ಆತ್ಮವಿಶ್ವಾಸ ಬೆಳೆಸುವ ಸಾಧನ :ಡಾ.ಕಾಗವಾಡೆ
    In (ರಾಜ್ಯ ) ಜಿಲ್ಲೆ
  • ಬೇಕಾಬಿಟ್ಟಿಯಾಗಿ ಬರಗಾಲ ಪರಿಸ್ಥಿತಿ ನಿಭಾಯಿಸುತ್ತಿರುವ ಸರ್ಕಾರ
    In (ರಾಜ್ಯ ) ಜಿಲ್ಲೆ
  • ತಂತ್ರಜ್ಞಾನ ಮಿತವಾಗಿ ಬಳಸಿ, ನೈಜ ಸಂಬಂಧಗಳಿಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಕೂಡಲೇ ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.